ಕರ್ನಾಟಕ

karnataka

ETV Bharat / city

ಭತ್ರಿ ಗ್ರಾಮದ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ - ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ

ಜಿಲ್ಲೆಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಭತ್ರಿ ಗ್ರಾಮದ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

Unknown man dead body was found near the bridge
ಅಪರಿಚಿತ ವ್ಯಕ್ತಿ ಶವ ಪತ್ತೆ

By

Published : Jan 30, 2020, 9:25 AM IST

ಬಳ್ಳಾರಿ: ಜಿಲ್ಲೆಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಭತ್ರಿ ಗ್ರಾಮದ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಇದು ಸುಮಾರು 35ರಿಂದ 40 ವರ್ಷದ ವ್ಯಕ್ತಿಯ ಶವ ಎಂದು ಅಂದಾಜಿಸಲಾಗಿದೆ. ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಅಸಿಸ್ಟೆಂಟ್ ಸಬ್ ​ಇನ್ಸ್​ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೃತನ ಚಹರೆ ಗುರುತು:
5.6 ಅಡಿ ಎತ್ತರ, ಕಪ್ಪು ಮೈ ಬಣ್ಣ, ಸಾಧಾರಣ ಮೈ ಕಟ್ಟು, ಬಲ ಕಾಲಿನ ಮುಂಗಾಲು ಯಾವುದೋ ಕಾರಣದಿಂದ ಕಟ್ ಆಗಿ ಮೊಂಡಾಗಿದೆ. ಮೃತನ ಸಂಬಂಧಿಕರು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು ಎಂದು ಸಬ್ ​ಇನ್ಸ್​ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details