ಕರ್ನಾಟಕ

karnataka

ETV Bharat / city

ಕಬ್ಬಿನ ಗದ್ದೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ - ಅಪರಿಚಿತ ವ್ಯಕ್ತಿ ಶವ ಪತ್ತೆ ನ್ಯೂಸ್​

ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

Unknown person dead body found in chikkodi
ಕಬ್ಬಿನ ಗದ್ದೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

By

Published : Jan 27, 2020, 12:53 PM IST

ಚಿಕ್ಕೋಡಿ: ಕಬ್ಬಿನ ಗದ್ದೆಯಲ್ಲಿ ಅಪರಿಚಿತ ವ್ಯಕ್ತಿವೋರ್ವನ ಶವ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮದಲ್ಲಿ ನಡೆದಿದೆ.

ಉಗಾರ ಬುದ್ರುಕ ಗ್ರಾಮದ ಪದ್ಮಾವತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶೀತಲಗೌಡ ಪಾಟೀಲ್​ ಅವರ ಕಬ್ಬಿನ ಗದ್ದೆಯಲ್ಲಿ ಅಪರಿಚಿತನ ಶವ ಪತ್ತೆಯಾಗಿದ್ದು, ಕೆಲಸಕ್ಕೆ ಹೋದ ಕೂಲಿ ಆಳುಗಳಿಗೆ ಕಬ್ಬಿನ ಗದ್ದೆಯಲ್ಲಿ ಈ ಶವ ಕಂಡಿದೆ. ಈ ಬಗ್ಗೆ ಸ್ಥಳೀಯರು ಹಾಗೂ ಶೀತಲಗೌಡ ಪಾಟೀಲ್​ ಹೋಗಿ ಪರಿಶೀಲಿಸಿ ಕೂಡಲೇ ಕಾಗವಾಡ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಬಳಿಕ ಪೊಲೀಸ್​ ಸಿಬ್ಬಂದಿ ಬಂದು ತನಿಖೆ ನಡೆಸಿದ್ದಾರೆ.

ಅಥಣಿ ಸಿಪಿಐ ಶಂಕರಗೌಡ ಪಾಟೀಲ್​ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸುಮಾರು 40 ವರ್ಷ ವಯಸ್ಸಿನ ವ್ಯಕ್ತಿಯ ಶವ ಎಂದು ಅಂದಾಜಿಸಲಾಗಿದೆ. ಮೃತ ವ್ಯಕ್ತಿ ನೀಲಿ ಬಣ್ಣದ ಟಿ-ಶರ್ಟ್, ಕಪ್ಪು ಬಣ್ಣದ ಪ್ಯಾಂಟ್​ ಧರಿಸಿದ್ದು, ಕಳೆದ ನಾಲ್ಕು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಜೊತೆಗೆ ಶವದ ಹತ್ತಿರ ಬೆಳೆಗಳಿಗೆ ಸಿಂಪಡಿಸುವ ಔಷಧಿ ಬಾಟಲ್ ಕಂಡು ಬಂದಿದೆ. ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details