ಬೆಳಗಾವಿ: ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಮಲಪ್ರಭಾ ನದಿ ಸೇತುವೆ ಸಮೀಪ ಇಂದು ಕಂಡು ಬಂದಿದೆ.
ಮಲಪ್ರಭಾ ನದಿ ಸೇತುವೆಯ ಬಳಿ ಅಪರಿಚಿತ ಮಹಿಳೆ ಶವ ಪತ್ತೆ.. - ಮಲಪ್ರಭಾ ನದಿ
ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಮಲಪ್ರಭಾ ನದಿ ಸೇತುವೆ ಸಮೀಪ ಇಂದು ಕಂಡು ಬಂದಿದೆ.
ಅಪರಿಚಿತ ಮಹಿಳೆ ಶವ ಪತ್ತೆ
ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಹೊರವಲಯದಲ್ಲಿರುವ ಮಲಪ್ರಭಾ ನದಿಯ ಸೇತುವೆ ಬಳಿ ಅಂದಾಜು 42 ರಿಂದ 45 ವರ್ಷದ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಬೆಳಗ್ಗೆ ವಾಯು ವಿಹಾರಕ್ಕೆ ಹೋಗಿದ್ದ ಸ್ಥಳೀಯರು ಮಹಿಳೆ ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇನ್ನು, ಈ ಕುರಿತಂತೆ ಸ್ಥಳಕ್ಕೆ ಖಾನಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.