ಚಿಕ್ಕೋಡಿ: ತಾಲೂಕಿನ ದೂಧಗಂಗಾ, ವೇದಗಂಗಾ ಮತ್ತು ಕೃಷ್ಣಾ ನದಿ ಪ್ರವಾಹ ಕುರಿತು ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಸಮನ್ವಯ ಸಮಿತಿ ರಚಿಸುವ ಬಗ್ಗೆ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರೊಂದಿಗೆ ಜೊತೆ ಚರ್ಚಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಪ್ರವಾಹ ಕುರಿತು ಕರ್ನಾಟಕ-ಮಹಾರಾಷ್ಟ್ರ ನಡುವೆ ಸಮನ್ವಯ ಸಮಿತಿ.. ಸಚಿವ ರಮೇಶ್ ಜಾರಕಿಹೊಳಿ - Krishna river flood
ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಕೃಷ್ಣಾನದಿಯ ಮೇಲಿರುವ ಹಳೇ ಬ್ರಿಜ್ ಕಮ್ ಬಂಧಾರವನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಪರಿಶೀಲನೆ ನಡೆಸಿದರು.
![ಪ್ರವಾಹ ಕುರಿತು ಕರ್ನಾಟಕ-ಮಹಾರಾಷ್ಟ್ರ ನಡುವೆ ಸಮನ್ವಯ ಸಮಿತಿ.. ಸಚಿವ ರಮೇಶ್ ಜಾರಕಿಹೊಳಿ Water Resources Minister statement on flood](https://etvbharatimages.akamaized.net/etvbharat/prod-images/768-512-7642568-813-7642568-1592315971766.jpg)
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ
ತಾಲೂಕಿನ ಕಲ್ಲೋಳ ಗ್ರಾಮದ ಕೃಷ್ಣಾನದಿಯ ಮೇಲಿರುವ ಹಳೇ ಬ್ರಿಡ್ಜ್ ಕಮ್ ಬಾಂದಾರ ಪರಿಶೀಲಿಸಿ ಆಯೋಜಿಸಲಾದ ಸಭೆಯಲ್ಲಿ ಅವರು ಮಾತನಾಡಿದರು.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ
ಬಿಜೆಪಿ ಸರ್ಕಾರ ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಿದೆ. ರೈತರ ಅನುಕೂಲಕ್ಕಾಗಿ ಎಲ್ಲಾ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನರಿಗೆ ಸಹಕಾರಿಯಾಗಲು ಪ್ರಯತ್ನಿಸಲಾಗುವುದು ಎಂದರು.