ಕರ್ನಾಟಕ

karnataka

ETV Bharat / city

ನಾಮಪತ್ರ ಹಿಂಪಡೆಯಲಿದ್ದಾರಾ ಅಥಣಿ ಜೆಡಿಎಸ್ ಅಭ್ಯರ್ಥಿ ಗುರಪ್ಪ ದಾಶ್ಯಾಳ ? - ಜೆಡಿಎಸ್ ಅಭ್ಯರ್ಥಿ ಗುರಪ್ಪ ದಾಶ್ಯಾಳ ನಾಮಪತ್ರ ಹಿಂಪಡೆ

ಅಥಣಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಹಿನ್ನೆಲೆ ಒಟ್ಟು 16 ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಕೆ ಮಾಡಿದ್ದಾರೆ. ಇದೆ 18 ರಂದು ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಗುರಪ್ಪ ದಾಶ್ಯಾಳ ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

Athani JDS candidate Gurappa Dashyala

By

Published : Nov 20, 2019, 7:27 PM IST

ಬೆಳಗಾವಿ: ಅಥಣಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಹಿನ್ನೆಲೆ ಒಟ್ಟು 16 ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಕೆ ಮಾಡಿದ್ದಾರೆ. ಇದೇ 18 ರಂದು ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಗುರಪ್ಪ ದಾಶ್ಯಾಳ ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

ಇಂದು ಮತ್ತು ನಾಳೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೆಡಿಎಸ್ ಅಭ್ಯರ್ಥಿ ಹಾಗೂ ಬಿಜೆಪಿ ಪಕ್ಷದ ಹಾಲಿ ಜಿಲ್ಲಾ ಪಂಚಾಯತಿ ಸದಸ್ಯ ಗುರಪ್ಪ ದಾಶ್ಯಾಳ 18 ರಂದು ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ ಅಥಣಿ ತಾಲೂಕಿನ ತೆಲಸಂಗ ಬ್ಲಾಕ್​ನ ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯರು ಆಗಿದ್ದರಿಂದ ಡಿಸಿಎಂ ಲಕ್ಷ್ಮಣ ಸವದಿ, ಗುರಪ್ಪ ದಾಶ್ಯಾಳ ಅವರಿಗೆ ನಾಮಪತ್ರ ವಾಪಸ್ ಪಡೆದುಕೊಳ್ಳಿ ಎಂದು ಒತ್ತಡ ಹೇರಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಅಥಣಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು

ಮೂಲ ಮಾಹಿತಿ ಪ್ರಕಾರ ಇಂದು 3 ಗಂಟೆಗೆ ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರೆ ಎನ್ನಲಾಗಿತ್ತು. ಆದರೆ ಇವತ್ತು ಯಾವುದೇ ನಾಮಪತ್ರ ಹಿಂಪಡೆದಿಲ್ಲ. ನಾಳೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುತ್ತಾರಾ ಎಂದು ಕಾದು ನೋಡಬೇಕಿದೆ.

ABOUT THE AUTHOR

...view details