ಕರ್ನಾಟಕ

karnataka

By

Published : Jul 16, 2021, 2:38 PM IST

ETV Bharat / city

ಕೃಷ್ಣಾನದಿ ಒಳಹರಿವು ಹೆಚ್ಚಳ: ಕಲ್ಲೋಳ-ಯಡೂರು ಸೇತುವೆ ಜಲಾವೃತ

ಸದ್ಯಕ್ಕೆ 56 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿರುವುದರಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರು ಸಂಪರ್ಕ ಸೇತುವೆ ಜಲಾವೃತಗೊಂಡಿದೆ.

yadur-kallol bridge completely submerged
ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರು ಸಂಪರ್ಕ ಸೇತುವೆ ಜಲಾವೃತ

ಚಿಕ್ಕೋಡಿ: ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದ ಕೊಂಕಣ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕೃಷ್ಣಾ ನದಿ ಒಳಹರಿವು ಹೆಚ್ಚಳವಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರು ಸಂಪರ್ಕ ಸೇತುವೆ ಜಲಾವೃತಗೊಂಡಿದೆ.

ಸದ್ಯಕ್ಕೆ 56 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದೆ.‌ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದ್ದು ನದಿ ತೀರದ ಜನರಲ್ಲಿ ಆತಂಕ ಮನೆಮಾಡಿದೆ. ಇಂದು ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಜಾರಿ ಮಾಡಲಾಗಿದೆ.

ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರು ಸಂಪರ್ಕ ಸೇತುವೆ ಜಲಾವೃತ

ಮಹಾರಾಷ್ಟ್ರದ ರಾಜಾಪೂರ ಬ್ಯಾರೆಜ್‌ನಿಂದ 44,750 ಕ್ಯೂಸೆಕ್, ದೂಧಗಂಗಾ ನದಿಯಿಂದ 11,649 ಕ್ಯೂಸೆಕ್ ನೀರು ಸೇರಿದಂತೆ ಒಟ್ಟು 56,000 ಕ್ಯೂಸೆಕ್​ಗೂ ಅಧಿಕ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದೆ. ಮಹಾರಾಷ್ಟ್ರದ ಕೊಯ್ನಾ- 23 ಮಿ.ಮೀ, ನವಜಾ-70 ಮಿ.ಮೀ, ಮಹಾಬಲೇಶ್ವರ-57 ಮಿ.ಮೀ, ವಾರಣಾ-10 ಮಿ.ಮೀ, ಕಾಳಮ್ಮವಾಡಿ-15 ಮಿ.ಮೀ, ರಾಧಾನಗರಿ-42 ಮಿ.ಮೀ, ಪಾಟಗಾಂವ-104 ಮಿ.ಮೀ ಮಳೆಯಾಗಿರುವುದು ವರದಿಯಾಗಿದೆ.

ಹಿಪ್ಪರಗಿ ಬ್ಯಾರೆಜ್‌ನಿಂದ 44,750 ಹಾಗೂ ಆಲಮಟ್ಟಿ ಜಲಾಶಯದಿಂದ 43,960 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.

ABOUT THE AUTHOR

...view details