ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉದ್ಯಮಬಾಗ ನಗರದಲ್ಲಿ ನಡೆದಿದೆ. ಮಜಗಾವಿಯ ಅಂಬೇಡ್ಕರ್ ಗಲ್ಲಿಯ ನಿವಾಸಿ ಯಲ್ಲೇಶ ಶಿವಾಜಿ ಕೊಲ್ಕರ್ (27) ಕೊಲೆಯಾದ ಯುವಕ. ಬೆಳ್ಳಂಬೆಳಗ್ಗೆ ಯಾರೋ ದುಷ್ಕರ್ಮಿಗಳು ಯಲ್ಲೇಶನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಬರ್ಬರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಕೊಲೆ - Belagavi Murder
ಬೆಳಗಾವಿಯ ಉದ್ಯಮಬಾಗ ನಗರದಲ್ಲಿ ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಕೊಲೆಗೆ ಅನೈತಿಕ ಸಂಬಂಧ ಕಾರಣವೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ
ಕೊಲೆಗೆ ಅನೈತಿಕ ಸಂಬಂಧ ಕಾರಣವೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಉದ್ಯಮಭಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಬೆಳಗಾವಿ: ಕಟ್ಟಡ ಕಾರ್ಮಿಕನ ಬರ್ಬರ ಹತ್ಯೆ, ರಸ್ತೆಬದಿ ಶವ ಪತ್ತೆ