ಬೆಳಗಾವಿ: ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನನ್ನು ಹತ್ಯೆಗೈದಿರುವ ಘಟನೆ ಬೆಳಗಾವಿ ತಾಲೂಕಿನ ರಣಕುಂಡೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ನಾಗೇಶ್ ಪಾಟೀಲ್ (30) ಮೃತ ಯುವಕ. ಹಳೆಯ ವೈಷಮ್ಯದ ಕಾರಣಕ್ಕೆ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ - youth killed in belagavi
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಂದಿರುವ ಘಟನೆ ಬೆಳಗಾವಿ ತಾಲೂಕಿನ ರಣಕುಂಡೆ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
ತಡರಾತ್ರಿ ಯುವಕನ ಮನೆಗೆ ನುಗ್ಗಿರುವ ದುಷ್ಕರ್ಮಿಗಳ ತಂಡ ಹಲ್ಲೆ ಮಾಡಿದ್ದಾರೆ. ಬಳಿಕ ಯುವಕನನ್ನು ಎಳೆದೊಯ್ದು ಮಾರಕಾಸ್ತ್ರಗಳಿಂದ ಹತ್ಯೆಗೈಯಲಾಗಿದೆ. ಶವವನ್ನು ಮನೆಯ ಬಳಿ ಎಸೆದು ಹಂತಕರು ಪರಾರಿಯಾಗಿದ್ದಾರೆ. ಬೆಳಗಾವಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ :ಮಿಂಚಿನ ಸರಳುಗಳಂತೆ ಕಾಣಿಸಿಕೊಂಡ ಉಲ್ಕಾಪಾತ: ವಿಡಿಯೋ ವೈರಲ್