ಬಳ್ಳಾರಿ: ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಶುಕ್ರವಾರ 1,282 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 11 ಜನರು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ವರದಿಯಾದ ಕೋವಿಡ್ ಸೋಂಕಿತರ ಸಂಖ್ಯೆ 51,612ಕ್ಕೆ ಏರಿಕೆಯಾಗಿದ್ದು, ಈವರೆಗೆ 727 ಜನ ಬಲಿಯಾಗಿದ್ದಾರೆ. ನಿನ್ನೆ 312 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 41,980 ಜನರು ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ ಉಭಯ ಜಿಲ್ಲೆಗಳಲ್ಲಿ 8,905 ಸಕ್ರಿಯ ಪ್ರಕರಣಗಳಿವೆ.