ಹೊಸಪೇಟೆ (ವಿಜಯನಗರ): ಹರಪನಹಳ್ಳಿಯ RTI ಕಾರ್ಯಕರ್ತ ಟಿ.ಶ್ರೀಧರ್ ಕೊಲೆ ಪ್ರಕರಣದ ಪತ್ತೆಗಾಗಿ ಪಿಎಸ್‌ಐ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅದಾವತ್ ತಿಳಿಸಿದ್ದಾರೆ.
ಹೊಸಪೇಟೆ RTI ಕಾರ್ಯಕರ್ತನ ಕೊಲೆ ಪ್ರಕರಣದ ಜಾಡು ಹಿಡಿಯಲು 3 ತಂಡ ರಚನೆ - murder case of RTI activist t shridar
ಶೀಘ್ರದಲ್ಲೇ RTI ಕಾರ್ಯಕರ್ತ ಟಿ.ಶ್ರೀಧರ್ ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುತ್ತೇವೆ. ಈ ಹಿನ್ನೆಲೆ ಪಿಎಸ್‌ಐ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅದಾವತ್ ಮಾಹಿತಿ ನೀಡಿದ್ದಾರೆ.
ದೂರವಾಣಿ ಮೂಲಕ 'ಈಟಿವಿ ಭಾರತ'ದೊಂದಿಗೆ ಮಾತನಾಡಿದ ಅವರು, ಆರ್‌ಟಿಐ ಕಾರ್ಯಕರ್ತರು ಜಿಲ್ಲೆಯಲ್ಲಿ ಇಂತಹ ಘಟನೆಗಳಿಗೆ ಹೆದರಬಾರದು. ಯಾವುದೇ ಕಾರ್ಯಕರ್ತರಿಗೆ ಬೆದರಿಕೆ ಕರೆಗಳಿದ್ದರೆ ಠಾಣೆಗೆ ಸಂಪರ್ಕಿಸಬೇಕು. ಇಲಾಖೆಯಿಂದ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಶೀಘ್ರದಲ್ಲೇ ಆರ್‌ಟಿಐ ಕಾರ್ಯಕರ್ತರ ಕೊಲೆ ಪ್ರಕರಣದ ಆರೋಪಿಗಳನ್ನು ಕಂಡುಹಿಡಿಯುತ್ತೇವೆ ಎಂದು ಹೇಳಿದರು.
ಹರಪನಹಳ್ಳಿ ಪಟ್ಟಣದ ಎಡಿಬಿ ಕಾಲೇಜ್ ಆವರಣಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸಿತು. ಈ ವೇಳೆ ಹೆಚ್ಚುವರಿ ಜಿಲ್ಲಾ ವರಿಷ್ಠಾಧಿಕಾರಿ ಟಿ.ಎಸ್.ಲಾವಣ್ಯ, ಬಳ್ಳಾರಿ ಗುಪ್ತಚರ ಇಲಾಖೆಯ ಡಿವೈಎಸ್ಪಿ ಬಿ.ಎಸ್. ತಳವಾರ್, ಹರಪನಹಳ್ಳಿ ಉಪವಿಭಾಗದ ಡಿವೈಎಸ್ಪಿ ವಿ.ಎಸ್. ಹಾಲಮೂರ್ತಿ ರಾವ್, ಸಿಪಿಐ ನಾಗರಾಜ ಎಂ.ಕಮ್ಮಾರ್, ಪಿಎಸ್‌ಐ ಪ್ರಕಾಶ್, ಕಿರಣ್, ನಾಗರಾಜ್ ಉಪಸ್ಥಿತರಿದ್ದರು.