ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 432 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 5298ಕ್ಕೇರಿಕೆಯಾಗಿದೆ. ನಾಲ್ವರು ಈ ಸೋಂಕಿಗೆ ಬಲಿಯಾಗಿದ್ದಾರೆ.
432 ಮಂದಿಗೆ ಸೋಂಕು, ನಾಲ್ವರು ಬಲಿ - Ballary corona case
ಈ ಪೈಕಿ 2219 ಮಂದಿ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಹಾಗೂ 86 ಮಂದಿ ಮೃತಪಟ್ಟಿದ್ದಾರೆ..
Ballary corona case
ಜಿಲ್ಲೆಯಲ್ಲಿ ಇಂದು ಒಂದೇ ದಿನ ಬರೋಬ್ಬರಿ 432 ಮಂದಿಗೆ ಸೋಂಕು ತಗುಲಿದೆ. ಸೋಂಕಿತರ ಸಂಖ್ಯೆ 5298ಕ್ಕೆ ತಲುಪಿದೆ. ಈ ಪೈಕಿ 2219 ಮಂದಿ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಹಾಗೂ 86 ಮಂದಿ ಮೃತಪಟ್ಟಿದ್ದಾರೆ. ಸದ್ಯ 2993 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಇಂದು ಒಂದೇ ದಿನ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಜೊತೆಗೆ 549 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ತಿಳಿಸಿದ್ದಾರೆ.