ಬಳ್ಳಾರಿ:ಜಿಲ್ಲೆಯನ್ನು ವಿಭಜನೆ ಮಾಡಬಾರದು ಹಾಗೂ ತುಂಗಭದ್ರಾ ಜಲಾಶಯದ ಹೂಳು ತೆಗೆಯುಲು ಬಜೆಟ್ನಲ್ಲಿ ಹಣ ಮೀಸಲಿಡಬೇಕು ಎಂದು ತುಂಗಭದ್ರಾ ರೈತ ಸಂಘದ ಜಿಲ್ಲಾಧ್ಯಕ್ಷ ಜಿ.ಪುರುಷೋತ್ತಮ ಗೌಡ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಮನವಿ ಮಾಡಿದರು.
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಮನವಿ ಪತ್ರ ಸಲ್ಲಿಸಿದ ಜಿ.ಪುರುಷೋತ್ತಮ ಗೌಡ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಬಾರದು ಹಾಗೂ ತುಂಗಭದ್ರಾ ಜಲಾಶಯದ ಹೂಳು ತೆಗೆಯುಲು ಬಜೆಟ್ನಲ್ಲಿ ಹಣ ಮೀಸಲಿಡಬೇಕು. ಜೊತೆಗೆ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ವಿಜಯನಗರ ಜಿಲ್ಲೆಯನ್ನಾಗಿ ರಚನೆ ಮಾಡಿದರೆ ಎರಡು ಜಿಲ್ಲೆಗಳ ರೈತರ ಮಧ್ಯೆ ಹಾಗೂ ಆಂಧ್ರ ಪ್ರದೇಶ ಮತ್ತು ಕರ್ನಾಟಕ ರಾಜ್ಯಗಳ ರೈತರ ನಡುವೆ ನೀರಿನ ಹಂಚಿಕೆಯಲ್ಲಿ ಗಲಭೆ ನಡೆಯುತ್ತವೆ. ಹಾಗಾಗಿ ಯಾವುದೇ ಕಾರಣಕ್ಕೂ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಬಾರದು ಎಂದರು.
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಮನವಿ ಪತ್ರ ಈ ಹಿಂದೆ ತುಂಗಭದ್ರಾ ಜಲಾಶಯದಲ್ಲಿ 33 ಟಿಎಂಸಿಯಷ್ಟು ಹೂಳು ತುಂಬಿರುವುದರಿಂದ ನೀರಿನ ಶೇಕಡಾ ಪ್ರಮಾಣ ಕಡಿಮೆಯಾಗಿ ರೈತರಿಗೆ ಸಮಸ್ಯೆಯಾಗಿದೆ. 2017ರಲ್ಲಿ ಬಿ.ಎಸ್.ಯಡಿಯೂರಪ್ಪ ವಿರೋಧ ಪಕ್ಷದ ನಾಯಕರಾಗಿದ್ದಾಗ ತುಂಗಭದ್ರಾ ಜಲಾಶಯದ ಹೂಳು ಎತ್ತುವ ಸ್ಥಳಕ್ಕೆ ಆಗಮಿಸಿ ಅದನ್ನು ಪರೀಶಿಲನೆ ಮಾಡಿ ಬೆಂಬಲ ನೀಡಿದ್ದರು. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾದ್ರೆ ಹೂಳು ಎತ್ತುವ ಕಾರ್ಯ ಮಾಡಿಸುವ ಭರವಸೆ ನೀಡಿದ್ದರು. ಈ ವರ್ಷದ ಬಜೆಟ್ನಲ್ಲಿ ತುಂಗಭದ್ರಾ ಜಲಾಶಯದ ಹೂಳು ತೆಗೆಯಲು 5 ಸಾವಿರ ಕೋಟಿ ಹಣವನ್ನು ಬಿಡುಗಡೆ ಮಾಡಬೇಕೆಂದು ತುಂಗಭದ್ರಾ ರೈತ ಸಂಘ ಒತ್ತಾಯ ಮಾಡುತ್ತದೆ ಎಂದರು.
ಈ ವೇಳೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ತುಂಗಭದ್ರಾ ರೈತ ಸಂಘದ ಅಧ್ಯಕ್ಷ ಜಿ.ಪುರುಷೋತ್ತಮ ಗೌಡ ಮತ್ತು ಸದಸ್ಯರು ಮನವಿ ಸಲ್ಲಿಸಿದರು.