ಕರ್ನಾಟಕ

karnataka

ETV Bharat / city

ಬಳ್ಳಾರಿಯಲ್ಲಿಂದು 500 ಹೊಸ ಕೊರೊನಾ ಕೇಸ್ ಪತ್ತೆ: 8 ಮಂದಿ ಬಲಿ

ಬಳ್ಳಾರಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 500 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಎಂಟು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

Bellary
Bellary

By

Published : Aug 20, 2020, 5:12 PM IST

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 500 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 16,253 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಒಂದೇ ದಿನ 500 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 10,480 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 195 ಮಂದಿ ಸಾವನ್ನಪ್ಪಿದ್ದಾರೆ. 5,578 ಸಕ್ರಿಯ ಪ್ರಕರಣಗಳಿವೆ.

ಇಂದು ಜಿಲ್ಲೆಯಲ್ಲಿ ಎಂಟು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಅಂದಾಜು 389 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ABOUT THE AUTHOR

...view details