ಬಳ್ಳಾರಿ:ಬಳ್ಳಾರಿ ಮಹಾನಗರ ಪಾಲಿಕೆಗೆ ಚುನಾವಣೆಗೆ ಮತದಾನ ಮುಕ್ತಾವಾಗಿದೆ. ಮಹಾಮಾರಿ ಕೊರೊನಾ ಸೋಂಕು ಹರಡುವ ಆತಂಕದಿಂದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬಾರದ ಹಿನ್ನೆಲೆಯಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ವೋಟಿಂಗ್ ಆಗಿಲ್ಲ.
ಪಾಲಿಕೆ ವ್ಯಾಪ್ತಿಯಲ್ಲಿ 39 ವಾರ್ಡ್ಗಳಿದ್ದು, 338 ಮತಗಟ್ಟೆಗಳನ್ನು ರಚನೆ ಮಾಡಲಾಗಿತ್ತು. ಮತದಾನ ಪ್ರಕ್ರಿಯೆಯಲ್ಲಿ ಕೋವಿಡ್ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಿದ್ದರೂ ಹಲವೆಡೆ ನಾಗರಿಕರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನೂ ಕಾಪಾಡದೇ ಮತದಾನ ಮಾಡಿರುವುದು ಕಂಡುಬಂತು.
ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಮಾಜಿ ಶಾಸಕ ಸೂರ್ಯ ನಾರಾಯಣ ರೆಡ್ಡಿ, ಮಾಜಿ ಸಂಸದರಾದ ಸಣ್ಣಫಕ್ಕೀರಪ್ಪ, ಜೆ.ಶಾಂತಾ, ಎಂಎಲ್ಸಿಗಳಾದ ಅಲ್ಲಂ ವೀರಭದ್ರಪ್ಪ, ಕೆ.ಸಿ.ಕೊಂಡಯ್ಯ, ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿ (ನಗರ) ಅಧ್ಯಕ್ಷ ಜಿ.ಎಸ್.ಮಹಮ್ಮದ ರಫೀಕ್ ,ಕಾಂಗ್ರೆಸ್ ಯುವ ಮುಖಂಡ ಜೆ.ಎಸ್.ಆಂಜನೇಯಲು ಸೇರಿ ಇನ್ನಿತರೆ ಮುಖಂಡರು ಮತದಾನ ಮಾಡಿದ್ದಾರೆ.
ಶೇ. 57.67ರಷ್ಟು ಮತದಾನ: