ಬಳ್ಳಾರಿ/ವಿಜಯನಗರ:ಉಭಯ ಜಿಲ್ಲೆಯಲ್ಲಿ ಭಾರಿ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ವ್ಯಕ್ತಿಯೊಬ್ಬ ಸಿಡಿಲು ಬಡಿದು ಮೃತಪಟ್ಟ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಾದ್ಯಂತ ಬೀಸಿದ ಬಿರುಗಾಳಿ ಮಳೆಗೆ ಹತ್ತಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ಅಲ್ಲದೇ ಕೆಲವೆಡೆ ಮರದ ಕೊಂಬೆಗಳು ಮುರಿದು ಬಿದ್ದಿವೆ.
ಇಂದು ಸಂಜೆ ಬೀಸಿದ ಭಾರಿ ಗಾಳಿ- ಮಳೆಗೆ ತೋರಣಗಲ್ಲು ಬಳಿ ಇರುವ ಜಿಂದಾಲ್ ಕಾರ್ಖಾನೆಯ ಆವರಣದಲ್ಲಿ ಹತ್ತಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿದ್ದು, ಮರದಡಿ ನಿಲ್ಲಿಸಿದ್ದ ಮೂರು ಕಾರುಗಳು ಜಖಂಗೊಂಡಿವೆ. ಅಲ್ಲದೇ ಜಿಂದಾಲ್ ಕಾರ್ಖಾನೆಯ ವ್ಯಾಪ್ತಿಯಲ್ಲಿ ಅತಿಹೆಚ್ಚು ಮರದ ಕೊಂಬೆಗಳು ಮುರಿದು ಬಿದ್ದಿವೆ.