ಬಳ್ಳಾರಿ:ಜಿಲ್ಲೆಯ ದೇವಲಾಪುರ ಗ್ರಾಮದ ಹೊರವಲಯದಲ್ಲಿ ಹಣಕಾಸಿನ ವಿಚಾರ ಹಾಗೂ ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ತೋರಣಗಲ್ಲು ಗ್ರಾಮದ ಆಟೋ ಚಾಲಕ ಶ್ರೀನಿವಾಸ್ (45) ಕೊಲೆಯಾಗಿದ್ದಾನೆ.
ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿಯ ಬರ್ಬರ ಕೊಲೆ - ವ್ಯಕ್ತಿಯ ಹತ್ಯೆ
ಬಳ್ಳಾರಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕೊಲೆ
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತನ ಪುತ್ರ ವಿನೋದ ನೀಡಿದ ದೂರು ಆಧರಿಸಿ ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿ, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ನೀಳ ದಂತ, ರಾಜ ಗಾಂಭೀರ್ಯದ ನಡಿಗೆಯ ಕಬಿನಿಯ ಶಕ್ತಿಮಾನ್ 'ಭೋಗೇಶ್ವರ' ಇನ್ನಿಲ್ಲ