ಕರ್ನಾಟಕ

karnataka

ETV Bharat / city

ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಬಳ್ಳಾರಿಯಲ್ಲಿ ಸಕಲ ಸಿದ್ಧತೆ.. ಡಿಡಿಪಿಯು ಮಾಹಿತಿ - ಪರೀಕ್ಷಾಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ

ಸಾಮಾಜಿಕ ಅಂತರವನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ 32 ಪರೀಕ್ಷಾ ಕೇಂದ್ರಗಳ ಪೈಕಿ 15 ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚುವರಿ ಪರಿಕ್ಷಾ ಕೇಂದ್ರಗಳೆಂದು ಗುರುತಿಸಲಾಗಿದೆ. ಜಿಲ್ಲೆಯಲ್ಲಿನ ಎಲ್ಲಾ 32 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 25268 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

Ability secondary PUC English exam in Bellary ddpu
ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಬಳ್ಳಾರಿಯಲ್ಲಿ ಸಕಲ ಸಿದ್ದತೆ: ಡಿಡಿಪಿಯು ಮಾಹಿತಿ

By

Published : Jun 17, 2020, 9:38 PM IST

Updated : Jun 17, 2020, 9:50 PM IST

ಬಳ್ಳಾರಿ: ಮಾರ್ಚ್‌ 23ರಂದು ನಡೆಯಬೇಕಿದ್ದ ದ್ವಿತೀಯ ಪಿಯು ಇಂಗ್ಲೀಷ್ ಪರೀಕ್ಷೆ ಕೊರೊನಾ ವೈರಸ್‌ನ ಸಾಂಕ್ರಾಮಿಕ ರೋಗವು ಹರಡುತ್ತಿರುವ ಹಿನ್ನೆಲೆ ಮುಂದೂಡಲಾಗಿತ್ತು. ಸದರಿ ಪರೀಕ್ಷೆಯನ್ನು ಇದೇ 18ರಂದು ನಡೆಯಲಿದೆ ಎಂದು ಪದವಿ ಪೂರ್ವಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ನಾಗರಾಜ್ ತಿಳಿಸಿದರು.

ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಬಳ್ಳಾರಿಯಲ್ಲಿ ಸಕಲ ಸಿದ್ಧತೆ

ನಗರದ ಮುನಿಸಿಪಲ್ ಕಾಲೇಜ್ ಆವರಣದಲ್ಲಿ ಈಟಿವಿ ಭಾರತದೊಂದಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ನಾಗರಾಜ್ ಮಾತನಾಡಿ, ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ 32ರ ಪೈಕಿ 15 ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚುವರಿ ಪರೀಕ್ಷಾ ಕೇಂದ್ರಗಳೆಂದು ಗುರುತಿಸಲಾಗಿದೆ. ಜಿಲ್ಲೆಯಲ್ಲಿನ ಎಲ್ಲಾ 32 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 25,268 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲಾ 32 ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿಕೊಳ್ಳಲು ಸಂಬಂಧಿಸಿದ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರುಗಳಿಗೆ ಸೂಚನೆ ನೀಡಲಾಗಿದೆ. 32 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಪರೀಕ್ಷಾ ಕಾರ್ಯದಲ್ಲಿ ತೊಡಗಿದ ಎಲ್ಲಾ ಸಿಬ್ಬಂದಿಗೆ ಗುರುತಿನ ಚೀಟಿ ಕಡ್ಡಾಯವಾಗಿ ಧರಿಸಲು ಸೂಚಿಸಲಾಗಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ ಪ್ರತಿ ವಿದ್ಯಾರ್ಥಿಗಳು ತಮ್ಮದೇ ಆದ ಕುಡಿಯುವ ನೀರಿನ ಬಾಟಲ್‌ಗಳನ್ನು ಮತ್ತು ಮಾಸ್ಕ್ ಧರಿಸಿ ಬರಲು ಸೂಚನೆ ನೀಡಲಾಗಿದೆ. ಕೋವಿಡ್-19 ಹಿನ್ನೆಲೆ ಎಲ್ಲಾ ವಿದ್ಯಾರ್ಥಿಗಳಿಗೆ ಉಷ್ಣಾಂಶ ಪರೀಕ್ಷೆ ಮತ್ತು ಸ್ಯಾನಿಟೈಸ್ ಮಾಡಲಿರುವ ಕಾರಣಕ್ಕಾಗಿ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಒಂದೂವರೆ ಗಂಟೆ ಮುಂಚಿತವಾಗಿಯೇ ಹಾಜರಿರುವಂತೆ ಸೂಚಿಸಲಾಗಿದೆ.

ಕೇಂದ್ರಗಳ ಮಾಹಿತಿ: ಬಳ್ಳಾರಿಯ ವೀರಶೈವ ಪದವಿ ಪೂರ್ವ ಕಾಲೇಜು, ಶ್ರೀಮತಿ ಎ.ಎಸ್.ಎಂ. ಪದವಿ ಪೂರ್ವ ಕಾಲೇಜು, ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜು, ಎಸ್.ಜಿ.ಸಂಯುಕ್ತ ಪದವಿ ಪೂರ್ವ ಕಾಲೇಜು, ವಾರ್ಡ್ಲಾ ಸಂಯುಕ್ತ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಸೇಂಟ್ ಜಾನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜು, ಬಿ.ಪಿ.ಎಸ್.ಸಿ. ಪದವಿ ಪೂರ್ವ ಕಾಲೇಜು, ಅಲ್ಲೀಪುರದ ಬಳ್ಳಾರಿ ಸ್ವತಂತ್ರ (ಬೆಸ್ಟ್) ಪದವಿ ಪೂರ್ವ ಕಾಲೇಜು, ಬಿ.ಬೆಳಗಲ್‌ನಲ್ಲಿರುವ ನಂದಿ ಪದವಿ ಪೂರ್ವ ಕಾಲೇಜು, ಕುರುಗೋಡಿನ ಎನ್ ಎಂ ಎಂ ಸರ್ಕಾರಿ ಪದವಿ ಪೂರ್ವ ಕಾಲೇಜು ಕೇಂದ್ರಗಳಲ್ಲಿ ನಡೆಯಲಿವೆ.

ಕೂಡ್ಲಿಗಿ ತಾಲೂಕಿನಲ್ಲಿ ಕೊಟ್ಟೂರೇಶ್ವರ ಪದವಿ ಪೂರ್ವ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಟ್ಟೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಕೇಂದ್ರಗಳಲ್ಲಿ ನಡೆಯಲಿವೆ. ಸಂಡೂರು ತಾಲೂಕಿನಲ್ಲಿ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಹೊಸಪೇಟೆ ತಾಲೂಕಿನ ವ್ಯಾಪ್ತಿಯಲ್ಲಿ ವಿಜಯನಗರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಕಂಪ್ಲಿಯ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಚಿತ್ತವಾಡ್ಗಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ವ್ಯಾಸನಕೆರೆಯ ಸ್ಮಯೋರ್ ಪದವಿ ಪೂರ್ವ ಕಾಲೇಜು, ಥಿಯೋಸಾಫಿಕಲ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ಸಿರುಗುಪ್ಪ ತಾಲ್ಲೂಕು ವಿ.ಕೆ.ಜೆ. ಪದವಿ ಪೂರ್ವ ಕಾಲೇಜು, ಎಸ್.ಇ.ಎಸ್. ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಹಡಗಲಿ ತಾಲ್ಲೂಕುನ ವ್ಯಾಪ್ತಿಗೆ ಜಿ.ಬಿ.ಆರ್. ಪದವಿ ಪೂರ್ವ ಕಾಲೇಜು, ಎಸ್.ಎಸ್.ಕೆ. ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಹಗರಿಬೊಮ್ಮನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಗಂ.ಭೀ.ಪದವಿ ಪೂರ್ವ ಕಾಲೇಜು, ರೇಣುಕಾ ಪದವಿ ಪೂರ್ವ ಕಾಲೇಜು ಮತ್ತು ಹರಪನಹಳ್ಳಿ ತಾಲೂಕಿನಲ್ಲಿ ಹೆಚ್ ಪಿ ಎಸ್ ಪದವಿ ಪೂರ್ವ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಎಸ್ ಯು ಜೆ ಎಂ ಪದವಿ ಪೂರ್ವ ಕಾಲೇಜು, ಎಸ್‌ಎಸ್‌ಹೆಚ್ ಜೈನ್ ಪದವಿ ಪೂರ್ವ ಕಾಲೇಜು, ಅರಸೀಕೆರೆಯ ಎಸ್‌ಎಂಸಿಕೆ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಯು ನಡೆಯಲಿದೆ.

Last Updated : Jun 17, 2020, 9:50 PM IST

For All Latest Updates

TAGGED:

ABOUT THE AUTHOR

...view details