ಬಳ್ಳಾರಿ:ಅಕ್ರಮ ಆಸ್ತಿ ಗಳಿಕೆ ಆರೋಪ ಮೇರೆಗೆ ಬಳ್ಳಾರಿಯ ಹವಂಭಾವಿ ಪ್ರದೇಶದಲ್ಲಿರುವ ಜೆಸ್ಕಾಂ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ಎ.ಎನ್.ವಿಜಯ್ ಕುಮಾರ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸಿಬಿ ಡಿವೈಎಸ್ಪಿ ಸೂರ್ಯನಾರಾಯಣ ನೇತೃತ್ವದ ಅಧಿಕಾರಿಗಳ ತಂಡವು ದಾಳಿ ನಡೆಸಿ, ಕಡತ ಹಾಗೂ ಕಾರುಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮೂರು ಅಧಿಕಾರಿಗಳ ನೇತೃತ್ವದ ತಂಡವು ಸಂಜೆಯವರೆಗೆ ದಾಖಲೆಗಳ ಪರಿಶೀಲನೆ ನಡೆಸಲಿದೆ ಎಂಬ ಮಾಹಿತಿ ದೊರೆತಿದೆ.