ಬಳ್ಳಾರಿ:ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಹೊಸಪೇಟೆ ತಾಲೂಕಿನ ಹಾರುವನಹಳ್ಳಿ ಬಳಿಯರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸಂಭವಿಸಿದೆ.
ಟ್ರ್ಯಾಕ್ಟರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ... ಇಬ್ಬರು ಸಾವು, ಹಲವರ ಸ್ಥಿತಿ ಗಂಭೀರ - ಗಂಭೀರ
ಟ್ರ್ಯಾಕ್ಟರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ-ಇಬ್ಬರು ಸ್ಥಳದಲ್ಲೇ ದುರ್ಮರಣ- 30 ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ- ಬಳ್ಳಾರಿ ಜಿಲ್ಲೆಯ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
ಟ್ರಾಕ್ಟರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ
ಯರ್ರಿಸ್ವಾಮಿ(30), ರೇಣುಕಮ್ಮ(32) ಮೃತರು. ಟ್ರ್ಯಾಕ್ಟರ್ನಲ್ಲಿ ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಫಾತ ಸಂಭವಿಸಿದೆ. ಅಪಘಾತದಿಂದ 30 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಐವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.