ಬಳ್ಳಾರಿ:ಕೆಎಸ್ಆರ್ಟಿಸಿ ಬಸ್ ಮತ್ತು ಟಾಟಾ ಏಸ್ ನಡುವೆ ಡಿಕ್ಕಿ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಬಳಿ ನಡೆದಿದೆ.
ಕೆಎಸ್ಆರ್ಟಿಸಿ ಬಸ್-ಟಾಟಾ ಏಸ್ ನಡುವೆ ಡಿಕ್ಕಿ: ಕೂಡ್ಲಿಗಿಯಲ್ಲಿ ಮೂವರು ಬಲಿ - ಕೂಡ್ಲಿಗಿ ಪೊಲೀಸ್ ಠಾಣೆ
ಬೆಂಗಳೂರಿನಿಂದ ಹೊಸಪೇಟೆಗೆ ಹೋಗುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಮತ್ತು ಟಾಟಾ ಏಸ್ ನಡುವೆ ಡಿಕ್ಕಿ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಬಳಿ ನಡೆದಿದೆ.
ಕೆಎಸ್ಆರ್ಟಿಸಿ ಬಸ್-ಟಾಟಾ ಏಸ್ ನಡುವೆ ಡಿಕ್ಕಿ
ಬೆಂಗಳೂರಿನಿಂದ ಹೊಸಪೇಟೆಗೆ ಹೋಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಬೆಳಗಿನ ಜಾವ ಘಟನೆ ನಡೆದಿದೆ. ಟಾಟಾ ಏಸ್ನಲ್ಲಿದ್ದ ನಾಗಮ್ಮ, ನಾಗಣ್ಣ ಹಾಗೂ ಚಾಲಕ ಪ್ರಕಾಶ್ ಮೃತಪಟ್ಟಿದ್ದು, ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ.
ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.