ಬಳ್ಳಾರಿ: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಮನೆ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲ್ವಿ ಗ್ರಾಮದಲ್ಲಿ ನಡೆದಿದೆ.
ಆಕಸ್ಮಿಕ ಅಗ್ನಿ ಅವಘಡ: ಮನೆ ಬೆಂಕಿಗಾಹುತಿ - ಹಗರಿಬೊಮ್ಮನಹಳ್ಳಿ ಅಗ್ನಿ ಅವಘಡ
ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲ್ವಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಮನೆ ಸುಟ್ಟು ಅಪಾರ ಪ್ರಮಾಣದ ದವಸ ಧಾನ್ಯಗಳು ಸುಟ್ಟು ಕರಕಲಾದ ಘಟನೆ ಸಂಭವಿಸಿದೆ.
ಆಕಸ್ಮಿಕವಾಗಿ ತಗುಲಿದ ಬೆಂಕಿ
ಬಯಲು ಪತ್ತಾರ ಗಂಗಮ್ಮ ಎಂಬುವವರ ಹಂಚಿನ ಮನೆಗೆ ಬೆಂಕಿ ತಗುಲಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದರಂದ ಯಾವುದೇ ಜೀವಹಾನಿಯಾಗಿಲ್ಲ. ಗ್ಯಾಸ್ ಸೋರಿಕೆಯಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.