ಕರ್ನಾಟಕ

karnataka

ETV Bharat / city

ಬಳ್ಳಾರಿ ಪಾಲಿಕೆ ಆಯುಕ್ತರಿಂದ ಅಂಗಡಿಗಳ ಮೇಲೆ ದಾಳಿ: ಅಪಾರ ಪ್ರಮಾಣದ ಪ್ಲಾಸ್ಟಿಕ್ ವಶ - Plastic Attack Operations

ಬಳ್ಳಾರಿ ಮಹಾನಗರ ಪಾಲಿಕೆ ಆವರಣ ಪ್ಲಾಸ್ಟಿಕ್ ಮುಕ್ತ ವಲಯ. ಇಲ್ಲಿ ಪ್ಲಾಸ್ಟಿಕ್ ಬಳಸಿದ್ರೆ ದಂಡ ವಿಧಿಸುವುದಾಗಿ ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ಎಚ್ಚರಿಕೆ ನೀಡಿದರು.

ಪಾಲಿಕೆಯಿಂದ ಮುಂದುವರಿದ ಪ್ಲಾಸ್ಟಿಕ್ ದಾಳಿ ಕಾರ್ಯಾಚರಣೆ...18500 ರೂ.ದಂಡ

By

Published : Oct 4, 2019, 4:43 AM IST

ಬಳ್ಳಾರಿ:ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ಅವರ ನೇತೃತ್ವದಲ್ಲಿ ನಗರದ ವಿವಿಧೆಡೆ ಗುರುವಾರ ದಾಳಿ ನಡೆಸಿದ ಪಾಲಿಕೆಯ ಕಂದಾಯ ಮತ್ತು ಆರೋಗ್ಯ ಇಲಾಖೆ ತಂಡವು ಅಪಾರ ಪ್ರಮಾಣದ ಪ್ಲಾಸ್ಟಿಕ್ ವಶಪಡಿಸಿಕೊಂಡು 18,500 ರೂ. ದಂಡ ವಿಧಿಸಿದೆ.

ಬಳ್ಳಾರಿ ಮಹಾನಗರ ಪಾಲಿಕೆ ಆವರಣವನ್ನು ಪ್ಲಾಸ್ಟಿಕ್ ಮುಕ್ತ ವಲಯವೆಂದು ಘೋಷಿಸಲಾಗಿದೆ. ಯಾವುದೇ ರೀತಿಯ ಪ್ಲಾಸ್ಟಿಕ್, ಕ್ಯಾರಿ ಬ್ಯಾಗ್ ಮತ್ತು ಪ್ಲಾಸ್ಟಿಕ್ ವಸ್ತುಗಳನ್ನ ಈ ಆವರಣದಲ್ಲಿ ಬಳಸುತ್ತಿರುವುದು ಕಂಡುಬಂದಲ್ಲಿ 500 ರೂ. ದಂಡ ವಿಧಿಸಲಾಗುವುದು ಎಂದು ಪಾಲಿಕೆ ಆಯುಕ್ತೆ ತುಷಾರಮಣಿ ಅವರು ಖಡಕ್​ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ, ಪರಿಸರ ಸ್ನೇಹಿ ಬಟ್ಟೆ ಬ್ಯಾಗ್‍ಗಳನ್ನು ಬಳಸುವಂತೆ ಸಲಹೆ ನೀಡಿದ್ದಾರೆ.

ಈವರೆಗೂ ಟ್ರೇಡ್‍ಲೈಸನ್ಸ್ ಪಡೆಯದಿದ್ದವರು ಕೂಡಲೇ ಲೈಸೆನ್ಸ್ ಪಡೆದುಕೊಳ್ಳಬೇಕು, ಇಲ್ಲದಿದ್ದಲ್ಲಿ ದುಪ್ಪಟ್ಟು ಪ್ರಮಾಣದ ದಂಡ ವಿಧಿಸಲಾಗುವುದು ಎಂದರು.

ABOUT THE AUTHOR

...view details