ಬಳ್ಳಾರಿ :ಕೃಷಿ ಸಚಿವ ಬಿ.ಸಿ ಪಾಟೀಲ್ ಒಬ್ಬ ಅಯೋಗ್ಯ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ. ಕಾರ್ತಿಕ್ ವ್ಯಂಗ್ಯವಾಡಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೋಡಿಹಳ್ಳಿ ಚಂದ್ರಶೇಖರ್ ಅಜ್ಞಾನಿ ಎಂಬ ಬಿ.ಸಿ. ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿದರು. 2004 ರಲ್ಲಿ ಎಂ.ಪಿ ಪ್ರಕಾಶ್ ಅವರ ಹಿಂದೆ ಗಿರಿಕಿ ಹೊಡೆದು, ಕಾಂಗ್ರೆಸ್ ಸೇರಿ ಶಾಸಕರಾಗಿ ನಂತರ ಬಿಜೆಪಿಯಿಂದ ಹಣ ಪಡೆದು ಪಕ್ಷಾಂತರಗೊಂಡು ಸಚಿವರಾಗಿದ್ದಾರೆ ಎಂದು ಆರೋಪಿಸಿದರು.
ಹಾವೇರಿ ಜಿಲ್ಲೆಯಲ್ಲಿ ರಸಗೊಬ್ಬರ ಕೊರೆತೆ ಇದೆ. ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ. ಅದರ ಬಗ್ಗೆ ಗಮನಹರಿಸುವುದನ್ನು ಬಿಟ್ಟು ರೈತಪರ ಹೋರಾಟ ಮಾಡುತ್ತಾ ಬಂದ ಕೋಡಿಹಳ್ಳಿ ಚಂದ್ರಶೇಖರ್ ಅವರ ಬಗ್ಗೆ ಮಾತನಾಡುವ ಯೋಗ್ಯತೆ ನಿಮಗಿಲ್ಲ ಎಂದು ಜೆ. ಕಾರ್ತಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ 41 ವರ್ಷಗಳಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರು ರೈತರರಿಗಾಗಿ ಪ್ರತಿಭಟನೆ, ಹೋರಾಟ ಮಾಡುತ್ತಿದ್ದಾರೆ. ಅವರು ಏನಾದ್ರೂ ಪಕ್ಷದಿಂದ ಪಕ್ಷಕ್ಕೆ ಹೋಗಿದ್ದರೆ ಮಂತ್ರಿಯಾಗಿ, ಸಿಎಂ ಸ್ಥಾನ ಪಡೆದುಕೊಳ್ಳುತ್ತಿದ್ದರು. ಆದರೆ ಬಿ.ಸಿ ಪಾಟೀಲ್ ಹಣ ಪಡೆದು ಸಚಿವ ಸ್ಥಾನವನ್ನು ಪಡೆದುಕೊಂಡ ಅಯೋಗ್ಯ ಎಂದಿದ್ದಾರೆ.