ಬಳ್ಳಾರಿ:ಮುಂಬೈನಿಂದ ಬಳ್ಳಾರಿ ಜಿಲ್ಲೆಗೆ ಆಗಮಿಸಿದ 11 ಜನರಲ್ಲಿ ಕೊರೊನಾ ವೈರಸ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
ಬಳ್ಳಾರಿಯಲ್ಲಿ ಒಂದೇ ದಿನ 11 ಮಂದಿಗೆ ಕೊರೊನಾ ಪಾಸಿಟಿವ್..! - ಬಳ್ಳಾರಿ 11 ಜನರಿಗೆ ಕೊರೊನಾ
ಲಾಕ್ಡೌನ್ ಸಡಿಲಿಕೆ ಹಿನ್ನಲೆ, ಮುಂಬೈನಿಂದ ಬಳ್ಳಾರಿಗೆ ಆಗಮಿಸಿದ್ದ 11 ಜನರಲ್ಲಿ ಕೊರೊನಾ ವೈರಸ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
ಲಾಕ್ಡೌನ್ ಸಡಿಲಿಕೆ ಹಿನ್ನೆಲೆ, ಮುಂಬೈನಿಂದ ಬಳ್ಳಾರಿಗೆ ಆಗಮಿಸಿದ್ದ ವಲಸೆ ಕಾರ್ಮಿಕರನ್ನು ಜಿಲ್ಲಾಡಳಿತ ಬಿಸಿಎಂ ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಮಾಡಿ, ಇವರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಸದ್ಯ ವರದಿ ಬಂದಿದ್ದು,11 ಜನರಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ. ಇವರಿಗೆ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಈವರೆಗೂ 13 ಮಂದಿ ಗುಣ ಮುಖರಾಗಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ. ಇನ್ನು, 16 ಜನರಿಗೆ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.