ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಗೆ ಕಾರಣರಾದ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ವಿರುದ್ಧ ಘೇರಾವ್ ಹಾಕಿದ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಕಾರ್ಯಕರ್ತರು ಮತ್ತು ಮುಖಂಡರನ್ನು ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದ್ದಾರೆ.
ನಗರದಲ್ಲಿಂದು ಆಯೋಜಿಸಿದ್ದ ಗ್ರಾಮ ಸ್ವರಾಜ್ ಕಾರ್ಯಕ್ರಮದ ನಿಮಿತ್ತ ನಗರಕ್ಕಾಗಮಿಸಿದ ಸಚಿವ ಆನಂದ ಸಿಂಗ್ ಅವರು ಅಧಿದೇವತೆ ಕನಕದುರ್ಗಮ್ಮ ದೇಗುಲಕ್ಕಿಂದು ಭೇಟಿ ನೀಡಿದ ಸಂದರ್ಭದಲ್ಲಿ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಮುಖಂಡರು ಉಭಯ ನಾಯಕರಿಗೆ ಘೇರಾವ್ ಹಾಕಿ ಅಕ್ರೋಶ ವ್ಯಕ್ತಪಡಿಸಿದರು.