ಬಳ್ಳಾರಿ: ಜಿಲ್ಲೆಯ ಅಸಂಘಟಿತ ವಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರನ್ನ ಮುಖ್ಯವಾಹಿನಿಗೆ ತರುವ ಮೂಲಕ ಕೇಂದ್ರ ಸರ್ಕಾರದ ನಾನಾ ಯೋಜನೆಗಳ ಸದ್ಬಳಕೆ ಕುರಿತು ಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಗಾಲಿ ಸೋಮಶೇಖರರೆಡ್ಡಿ ತಿಳಿಸಿದ್ದಾರೆ.
ಅಸಂಘಟಿತ ಕಾರ್ಮಿಕರನ್ನ ಮುಖ್ಯವಾಹಿನಿಗೆ ತರಲು ಜಾಗೃತಿ ಕಾರ್ಯಕ್ರಮ: ಶಾಸಕ ಸೋಮಶೇಖರ ರೆಡ್ಡಿ - ದತ್ತೋಪಂತ ಠೇಂಗಡೆ ಜನ್ಮಶತಮಾನೋತ್ಸವ ನಿಮಿತ್ತ
ಬಳ್ಳಾರಿ ಜಿಲ್ಲೆಯ ಅಸಂಘಟಿತ ವಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರನ್ನ ಮುಖ್ಯವಾಹಿನಿಗೆ ತರುವ ಮೂಲಕ ಕೇಂದ್ರ ಸರ್ಕಾರದ ನಾನಾ ಯೋಜನೆಗಳ ಸದ್ಬಳಕೆ ಕುರಿತು ಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಗಾಲಿ ಸೋಮಶೇಖರರೆಡ್ಡಿ ತಿಳಿಸಿದ್ದಾರೆ.
ಭಾರತೀಯ ಮಜ್ದೂರ್ ಸಂಘ ಮತ್ತು ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ ಸಂಘ ಹಾಗೂ ಕಾರ್ಮಿಕ ಸಂಘಟನೆಗಳ ಸಹಯೋಗದಲ್ಲಿ ದತ್ತೋಪಂತ ಠೇಂಗಡೆ ಜನ್ಮಶತಮಾನೋತ್ಸವ ನಿಮಿತ್ತ ಮಾರ್ಚ್ 1 ರಂದು ಅಸಂಘಟಿತ ವಲಯಗಳಲ್ಲಿನ ಕಾರ್ಮಿಕರನ್ನ ಒಗ್ಗೂಡಿಸುವ ಮಹತ್ ಕಾರ್ಯಕ್ಕೆ ಕೈಹಾಕಲಾಗಿದೆ ಎಂದರು.
ಅಸಂಘಟಿತ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರು ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳಿಂದ ದೂರ ಉಳಿದು ಸೌಲಭ್ಯದಿಂದ ವಂಚಿತರಾಗಿದ್ದಾರೆ. ಅವರನ್ನ ಮುಖ್ಯವಾಹಿನಿಗೆ ತರುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮಾರ್ಚ್ 1 ರಂದು ಆರ್ಎಸ್ಎಸ್ ನ ಅಖಿಲ ಭಾರತ ವ್ಯವಸ್ಥಾಪಕ ಪ್ರಮುಖ್ ಮಂಗೇಶ ಭೇಂದೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
TAGGED:
ಶಾಸಕ ಗಾಲಿ ಸೋಮಶೇಖರರೆಡ್ಡಿ