ಕರ್ನಾಟಕ

karnataka

ETV Bharat / city

ಅಖಂಡ ಬಳ್ಳಾರಿಗಾಗಿ ಬಂದ್​​ಗೆ ಕೊಂಡಯ್ಯ ವಿರೋಧ - Ballary Band

ಅಖಂಡ ಬಳ್ಳಾರಿಗಾಗಿ ಆಗ್ರಹಿಸಿ ಬಳ್ಳಾರಿ ಬಂದ್​ಗೆ ಕರೆ ನೀಡಿದ್ದ ಕನ್ನಡಪರ ಹಾಗೂ ರೈತ ಸಂಘಟನೆಗಳ ನಿರ್ಧಾರಕ್ಕೆ ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.

ballari-mlc-kondaih-byte-news

By

Published : Oct 1, 2019, 8:55 PM IST

ಬಳ್ಳಾರಿ:ಅಖಂಡ ಬಳ್ಳಾರಿಗಾಗಿ ಆಗ್ರಹಿಸಿ ಬಳ್ಳಾರಿ ಬಂದ್​ಗೆ ಕರೆ ನೀಡಿದ್ದ ಕನ್ನಡಪರ ಹಾಗೂ ರೈತ ಸಂಘಟನೆಗಳ ನಿರ್ಧಾರಕ್ಕೆ ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಪ್ರತ್ಯೇಕ ವಿಜಯನಗರ ಜಿಲ್ಲೆಯ ರಚನೆಗೆ ನನಗಂತೂ ಸಹಮತವಿದೆ. ಕೆಲವರು ಇದಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ. ಅದು ಅವರವರ ವೈಯಕ್ತಿಕ ಅಭಿಪ್ರಾಯ. ಬಹಿರಂಗವಾಗಿಯೇ ಅಭಿಪ್ರಾಯ ವ್ಯಕ್ತಪಡಿಸೋದಲ್ಲ. ಸಚಿವ ಸಂಪುಟ ಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ

ವಿಜಯನಗರ ಜಿಲ್ಲೆ ರಚನೆ ಕುರಿತು ಚರ್ಚಿಸುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎಲ್ಲ ಶಾಸಕರ ಸಭೆಯನ್ನು ನಾಳೆ ಕರೆದಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬಹುದು ಎಂದರು.

ವಿಜಯನಗರ ಪ್ರತ್ಯೇಕ ಜಿಲ್ಲೆಯಾದ್ರೆ ಒಳ್ಳೆಯದು. ಹೆಚ್ಚಿನ ಅಭಿವೃದ್ಧಿಯಾಗುತ್ತದೆ ಎಂದು ಪರೋಕ್ಷವಾಗಿ ಶಾಸಕ ಕರುಣಾಕರ ರೆಡ್ಡಿಗೆ ಕೊಂಡಯ್ಯ ಟಾಂಗ್ ನೀಡಿದ್ದಾರೆ.

ABOUT THE AUTHOR

...view details