ಬಳ್ಳಾರಿ: ಉದಯಪುರದಲ್ಲಿ ಇತ್ತೀಚೆಗೆ ನಡೆದ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣ ಖಂಡಿಸಿ ಇಂದು ಬಳ್ಳಾರಿ ಬಂದ್ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬೈಕ್ ರ‍್ಯಾಲಿ ಆರಂಭವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದ ಪ್ರಮುಖ ವೃತ್ತಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಬಿಜೆಪಿ ಮುಖಂಡರು, ಮಹಾನಗರ ಪಾಲಿಕೆಯ ಸದಸ್ಯರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಸೇರಿದಂತೆ ಸುಮಾರು ನೂರಕ್ಕೂ ಹೆಚ್ಚು ಮಂದಿ ಬೈಕ್ನಲ್ಲಿ ಹಿಂದೂ ಧ್ವಜ ಕಟ್ಟಿಕೊಂಡು ಮೂರು ತಂಡಗಳಾಗಿ ಕನಕದುರ್ಗಮ್ಮ ದೇವಸ್ಥಾನದಿಂದ ಬೈಕ್ ರ‍್ಯಾಲಿ ನಡೆಸುತ್ತಿದ್ದಾರೆ.
ಪ್ರತಿಭಟನಾಕಾರರು ತಾಳೂರು ರಸ್ತೆಯಲ್ಲಿ ಟಯರ್ಗೆ ಬೆಂಕಿ ಹಚ್ಚಿ, ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂಗಡಿ ಮುಂಗಟ್ಟುಗಳನ್ನು ಮಾಲೀಕರು ಸ್ವಯಂಪ್ರೇರಣೆಯಿಂದ ಮುಚ್ಚಿ ಬೆಂಬಲ ನೀಡುತ್ತಿದ್ದಾರೆ. ಚಿತ್ರಮಂದಿರ, ಪೆಟ್ರೋಲ್ ಬಂಕ್, ಹೋಟೆಲ್ ಸೇರಿದಂತೆ ಬಹುತೇಕ ಇಂದಿನ ವ್ಯಾಪಾರ ವಹಿವಾಟು ಬಂದ್ ಆಗಿದೆ.