ಕರ್ನಾಟಕ

karnataka

ETV Bharat / city

ಹುಬ್ಬಳ್ಳಿ ಗಲಾಟೆ ಪ್ರಕರಣ.. ಗೃಹ ಸಚಿವರು ಗಟ್ಟಿತನ ತೋರಿಸುವಂತೆ ಯತ್ನಾಳ್ ಒತ್ತಾಯ

ಪ್ರಕರಣ ಸಂಬಂಧ ಕಠಿಣ ಕ್ರಮ ಕೈಗೊಳ್ಳಬೇಕು. ಯಾರು ಗುಂಡಾಗಳಿದ್ದಾರೆ, ಯಾರು ದೇಶ ದ್ರೋಹಿಗಳಿದ್ದಾರೆಂಬುದನ್ನು ಪತ್ತೆ ಹಚ್ಚಬೇಕು. ರಾಜ್ಯ ಸರ್ಕಾರ ಮತ್ತು ಗೃಹ ಸಚಿವರು ತಮ್ಮ ಗಟ್ಟಿತನ ತೋರಿಸಬೇಕೆಂದು ಯತ್ನಾಳ್ ಒತ್ತಾಯಿಸಿದ್ದಾರೆ.

Basangouda Patil Yatnal reacts on Hubli stone pelting case
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

By

Published : Apr 17, 2022, 12:12 PM IST

Updated : Apr 17, 2022, 2:24 PM IST

ಹೊಸಪೇಟೆ(ವಿಜಯನಗರ): ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಆವರಣದಲ್ಲಿ ದೊಡ್ಡಮಟ್ಟದ ಗಲಾಟೆ ಆಗಿದೆ. ಈ ಕುರಿತಂತೆ ಹೊಸಪೇಟೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣ ಸಂಬಂಧ ಕಠಿಣ ಕ್ರಮ ಕೈಗೊಳ್ಳಬೇಕು. ಯಾರು ಗುಂಡಾಗಳಿದ್ದಾರೆ, ಯಾರು ದೇಶ ದ್ರೋಹಿಗಳಿದ್ದಾರೆಂಬುದನ್ನು ಪತ್ತೆ ಹಚ್ಚಬೇಕು. ರಾಜ್ಯ ಸರ್ಕಾರ ಮತ್ತು ಗೃಹ ಸಚಿವರು ತಮ್ಮ ಗಟ್ಟಿತನ ತೋರಿಸಬೇಕೆಂದು ಹೇಳಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಕೆಟ್ಟ ಚಾಳಿ ಕರ್ನಾಟಕದಲ್ಲಿ ಪ್ರಾರಂಭವಾಗಿದೆ. ಕಿಡಿಗೇಡಿಗಳ ಶಕ್ತಿ ಕುಗ್ಗಿಸಲು ಸಿಎಂ ಮತ್ತು ಗೃಹ ಸಚಿವರು ಕ್ರಮ ಕೈಗೊಳ್ಳಬೇಕು. ತಕ್ಷಣ ಅವರ ಮನೆ ಹೊಕ್ಕು ಅವರನ್ನು ಹೊರ ತರಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಆಕ್ಷೇಪಾರ್ಹ ಪೋಸ್ಟ್​ನಿಂದ ಹುಬ್ಬಳ್ಳಿ ಪ್ರಕ್ಷುಬ್ಧ.. ಪೊಲೀಸ್ ಠಾಣೆ ಮುಂದೆ ಕಲ್ಲು ತೂರಾಟ, ವಾಹನಗಳು ಜಖಂ

ಘಟನೆ: ಪ್ರಾರ್ಥನಾ ಸ್ಥಳವೊಂದರ ಮೇಲೆ ಧ್ವಜವೊಂದನ್ನು ಹಾರಿಸಿದ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಹಿನ್ನೆಲೆಯಲ್ಲಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಆವರಣದಲ್ಲಿ ಕಲ್ಲು ತೂರಾಟ ನಡೆಸಲಾಗಿದೆ. ಹುಬ್ಬಳ್ಳಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

Last Updated : Apr 17, 2022, 2:24 PM IST

ABOUT THE AUTHOR

...view details