ಬಳ್ಳಾರಿ:ಬಸ್ ಚಾಲಕನ ಅಜಾಗರೂಕತೆ ಮತ್ತು ವೇಗದಿಂದಾಗಿ ಡಿಕ್ಕಿ ಸಂಭವಿಸಿ ಎರಡು ಎತ್ತುಗಳು ಸ್ಥಳದಲ್ಲೇ ಸಾವನ್ನಪ್ಪಿ, ಓರ್ವ ಗಂಭೀರ ಗಾಯಗೊಂಡ ಘಟನೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಹೊರವಲಯದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಬೆಂಗಳೂರಿನಿಂದ ಲಿಂಗಸೂಗೂರಿಗೆ ಹೊರಟಿದ್ದ ಸಾರಿಗೆ ಬಸ್, ಎತ್ತಿನ ಚಕ್ಕಡಿಗೆ ಎದುರಿನಿಂದ ರಭಸವಾಗಿ ಡಿಕ್ಕಿಯಾಗಿದೆ. ಪರಿಣಾಮ ಎರಡು ಮೂಕಪ್ರಾಣಿಗಳು ಸ್ಥಳದಲ್ಲೇ ಪ್ರಾಣತೆತ್ತಿವೆ. ರೈತ ಶೇಕ್ಷವಲಿ(42 ) ತೀವ್ರ ಗಾಯಗೊಂಡಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.