ಬಳ್ಳಾರಿ:ನಂಜನಗೂಡಿನ ಖಾಸಗಿ ಕೈಗಾರಿಕಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನೆಲೆ ರೋಗಿಯೊಂದಿಗೆ ಸಂಪರ್ಕ ಹೊಂದಿದ್ದವರನ್ನು ನಗರದ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿರಿಸಲಾಗಿದೆ.
ಕೊರೊನಾ ಸೋಂಕಿತನ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ನಲ್ಲಿರಿಸಿದ ಬಳ್ಳಾರಿ ಜಿಲ್ಲಾಡಳಿತ..
ಮಹಾಮಾರಿ ಕೊರೊನಾ ರೋಗಿಯೊಂದಿಗೆ ಸಂಪರ್ಕದಲ್ಲಿದ್ದವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳ್ಳಾರಿ ಜಿಲ್ಲಾಡಳಿತ
ನಂಜನೂಗೂಡಿನಲ್ಲಿ ಕೆಲಸಮಾಡುತ್ತಿದ್ದ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಹಾಗಲೂರು ನಿವಾಸಿಗೆ ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ರೋಗಿಯನ್ನು ಅಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನೊಂದಿಗೆ ತೆರಳಿದ್ದ ಓರ್ವ ವೈದ್ಯ ಮತ್ತು ಆತನ ತಂದೆ ಹಾಗೂ ಕಾರು ಚಾಲಕ ಬಳ್ಳಾರಿಗೆ ಮರಳಿದ್ದಾರೆ. ಸದ್ಯ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಅವರನ್ನ ವಿಮ್ಸ್ ಜಿಲ್ಲಾಸ್ಪತ್ರೆಯ ಕೊವಿಡ್-19 ವಾರ್ಡ್ಗೆ ದಾಖಲಿಸಿ ನಿಗಾದಲ್ಲಿರಿಸಿದೆ.