ಬಳ್ಳಾರಿ : ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ಇದೇ ಸೆ.21 ರಿಂದ ಸೆ.28ರವರೆಗೆ ನಡೆಯಲಿದ್ದು, ವಾರ್ಷಿಕ ಪರೀಕ್ಷೆಗಳಂತೆ ಈ ಪೂರಕ ಪರೀಕ್ಷೆಗಳನ್ನು ಸಹ ಯಾವುದೇ ರೀತಿಯ ಲೋಪಗಳಿಗೆ ಅಸ್ಪದ ಮಾಡಿಕೊಡದೇ ಸೂಸುತ್ರವಾಗಿ ನಡೆಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಸೂಚನೆ ನೀಡಿದರು.
ಸೂಸುತ್ರ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಸಿ.. ಬಳ್ಳಾರಿ ಅಪರ ಜಿಲ್ಲಾಧಿಕಾರಿ ಮಂಜುನಾಥ ಸೂಚನೆ
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ರಾಮಪ್ಪ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಮೂಲಸೌಲಭ್ಯಗಳ ವ್ಯವಸ್ಥೆ ಸರಿಯಾಗಿ ಮಾಡಿಕೊಳ್ಳಿ, ಸಿಸಿ ಟಿವಿಗಳ ಕಾರ್ಯವನ್ನು ಪರೀಶಿಲಿಸಿಕೊಳ್ಳಿ, ಆರೋಗ್ಯ, ಪೊಲೀಸ್ ಹಾಗೂ ಇತರೆ ಇಲಾಖೆಗಳ ಸಹಾಯ ಪಡೆದು ಪರೀಕ್ಷಾ ಸಮಯದಲ್ಲಿ ಯಾವುದೇ ಅವ್ಯವಹಾರ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಿ..
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ಪಾಸಿಟಿವ್ ಕಂಡು ಬಂದ ವಿದ್ಯಾರ್ಥಿಗಳಿಗೆ ನಗರದ ಮೆಡಿಕಲ್ ಡೆಂಟಲ್ ಕಾಲೇಜಿನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಿಸಬೇಕು. ಜಿಲ್ಲೆಯ 26 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಎಲ್ಲಾ ಕೊಠಡಿಗಳಿಗೆ ಸ್ಯಾನಿಟೈಸ್ ಮಾಡಬೇಕು ಮತ್ತು ಪ್ರತಿ ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿಯೇ ಒಳಬಿಡಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ರಾಮಪ್ಪ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಮೂಲಸೌಲಭ್ಯಗಳ ವ್ಯವಸ್ಥೆ ಸರಿಯಾಗಿ ಮಾಡಿಕೊಳ್ಳಿ, ಸಿಸಿ ಟಿವಿಗಳ ಕಾರ್ಯವನ್ನು ಪರೀಶಿಲಿಸಿಕೊಳ್ಳಿ, ಆರೋಗ್ಯ, ಪೊಲೀಸ್ ಹಾಗೂ ಇತರೆ ಇಲಾಖೆಗಳ ಸಹಾಯ ಪಡೆದು ಪರೀಕ್ಷಾ ಸಮಯದಲ್ಲಿ ಯಾವುದೇ ಅವ್ಯವಹಾರ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಿ ಎಂದು ತಿಳಿಸಿದರು.