ಬಳ್ಳಾರಿ:ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರದ ತಾಲೂಕು ಕಚೇರಿ ಬಸ್ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಶ್ರೀರಾಮುಲು, ಶಾಸಕ ಜಿ.ಸೋಮಶೇಖರ್ ರೆಡ್ಡಿ ಭಾವಚಿತ್ರಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಅಳವಡಿಸುವ ಮೂಲಕ ಪಾಲಿಕೆಯ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ.
ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಚುನಾವಣಾಧಿಕಾರಿ ಕಚೇರಿಯೊಳಗೆ ಅಭ್ಯರ್ಥಿ ಸೇರಿ 5 ಜನರು ಮಾತ್ರ ಪ್ರವೇಶಿಸಬೇಕು. ಜೊತೆಗೆ ಮೆರವಣಿಗೆಯಲ್ಲಿ 50ಕ್ಕಿಂತ ಜಾಸ್ತಿ ಜನರು ಸೇರಬಾರದು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ.