ಬಳ್ಳಾರಿ: ಬಾಲಕನೊಬ್ಬ ಕೃಷಿಹೊಂಡದಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, ಮೃತಪಟ್ಟಿರುವ ಘಟನೆ ಸಿರುಗುಪ್ಪ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಬಾಲಾಜಿ ಎಂದು ಗುರುತಿಸಲಾಗಿದೆ.
ಬಾಲಾಜಿ ತಂದೆ ಭೀಮೇಶ ಕಳೆದ ತಿಂಗಳ ಹಿಂದೆಯಷ್ಟೇ ಎರಡು ಎಕೆರೆ ಭೂಮಿಯನ್ನು ಖರೀದಿಸಿದ್ದಾರೆ. ಈ ಭೂಮಿಯಲ್ಲಿ ಕೃಷಿ ಹೊಂಡ ನಿರ್ಮಿಸಿಕೊಂಡಿದ್ದಾರೆ. ಅದರ ಬಳಿ ಹೋದಾಗ ಬಾಲಾಜಿ ಕಾಲು ಜಾರಿ ಬಿದ್ದು, ಅಸ್ವಸ್ಥನಾಗಿದ್ದಾನೆ. ಬಳಿಕ ಬಾಲಕನನ್ನು ಚಿಕಿತ್ಸೆಗಾಗಿ ಆ್ಯಂಬುಲೆನ್ಸ್ ಮೂಲಕ ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.