ವಿಜಯನಗರ: ಸದಾ ಒಂದಿಲ್ಲೊಂದು ವಿವಾದದಿಂದ ಸುದ್ದಿಯಾಗುವ ಮಾಜಿ ಸಚಿವ, ಹೂವಿನಹಡಗಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಸರ್ಕಾರಿ ಕಚೇರಿ ಆವರಣದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು ಹೊಸ ವಿವಾದ ಸೃಷ್ಟಿಸಿಕೊಂಡರು.
ಯಾವುದೇ ಸರ್ಕಾರಿ ಕಚೇರಿಯಲ್ಲಿ ಮೋಜು-ಮಸ್ತಿ, ಹುಟ್ಟುಹಬ್ಬ ಸೇರಿದಂತೆ ಇತರೆ ಯಾವುದೇ ಖಾಸಗಿ ಕಾರ್ಯಕ್ರಮಗಳನ್ನು ನಡೆಸದಂತೆ ಸರ್ಕಾರದ ಆದೇಶವಿದೆ. ಆದರೆ ಈ ಆದೇಶವನ್ನು ಪಿ.ಟಿ.ಪರಮೇಶ್ವರ ನಾಯ್ಕ ಗಾಳಿಗೆ ತೂರಿದರು.