ಬಳ್ಳಾರಿ: ಕೊರೊನಾ ಎರಡನೇ ಅಲೆಯು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಾಗುತ್ತಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಜಿಂದಾಲ್ ಸಮೂಹ ಸಂಸ್ಥೆಯಲ್ಲೇ ಈ ವರ್ಷ 525 ನೌಕರರಲ್ಲಿ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಐದರಿಂದ ಎಂಟು ಮಂದಿ ಸೋಂಕಿನಿಂದ ಮೃತಪಡುತ್ತಿದ್ದರು. ಆದರೆ, ನಿನ್ನೆ ಒಂದೇ ದಿನ 16 ಮಂದಿ ಸೋಂಕಿಗೆ ಬಲಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಈ ಮೂಲಕ ಸಾವಿನ ಸಂಖ್ಯೆ 656ಕ್ಕೆ ಏರಿಕೆಯಾಗಿದೆ.