ಬಳ್ಳಾರಿ: ಗಣಿ ಜಿಲ್ಲೆಯಲ್ಲಿಂದು ಒಂದೇ ದಿನ 105 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಇದೀಗ 1,787ಕ್ಕೆ ಏರಿಕೆಯಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿಂದು ಬರೋಬ್ಬರಿ 105 ಮಂದಿಗೆ ಕೊರೊನಾ ಪಾಸಿಟಿವ್! - bellary corona update
ಬಳ್ಳಾರಿ ಜಿಲ್ಲೆಯಲ್ಲಿಂದು ಒಂದೇ ದಿನ 105 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 32 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿಂದು ಒಂದೇ ದಿನ 105 ಮಂದಿಗೆ ಕೊರೊನಾ ಪಾಸಿಟಿವ್
ಅಲ್ಲದೆ, ಇಂದು 32 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 1,787 ಸೋಂಕಿತರ ಪೈಕಿ 1,024 ಮಂದಿ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 46 ಮಂದಿ ಕೊರೊನಾಗೆ ಬಲಿಯಾಗಿದ್ದು, 722 ಸಕ್ರಿಯ ಪ್ರಕರಣಗಳಿವೆ.
ಅಂದಾಜು 86 ಮಂದಿ ಹೋಂ ಐಸೋಲೇಷನ್ ಕ್ವಾರಂಟೈನ್ನಲ್ಲಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.