ಬಳ್ಳಾರಿ:ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಶುಕ್ರವಾರ 1,650 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದರೆ, 23 ಮಂದಿ ಮೃತಪಟ್ಟಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 82,583ಕ್ಕೆ ಏರಿಕೆಯಾಗಿದೆ. ಎರಡೂ ಜಿಲ್ಲೆಗಳಲ್ಲಿ ಮೃತರ ಸಂಖ್ಯೆ 1,186ಕ್ಕೆ ತಲುಪಿದೆ. ನಿನ್ನೆ 3,117 ಜನರು ಸಂಪೂರ್ಣವಾಗಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 65,389 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 16,008 ಸಕ್ರಿಯ ಪ್ರಕರಣಗಳಿವೆ.