ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ನೌಕರನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಮರಿಯಮ್ಮನಹಳ್ಳಿ ಕಾರ್ಖಾನೆ ಕಾರ್ಮಿಕನಿಗೆ ಕೊರೊನಾ ಪಾಸಿಟಿವ್ - ಮರಿಯಮ್ಮನಹಳ್ಳಿ ಕಾರ್ಖಾನೆ ಕಾರ್ಮಿಕನಿಗೆ ಕೊರೊನಾ ಪಾಸಿಟಿವ್
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಕಾರ್ಖಾನೆ ನೌಕರನಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಆತಂಕ ಮನೆಮಾಡಿದೆ.
ಕೊರೊನಾ ಪಾಸಿಟಿವ್
ಕಳೆದ ಕೆಲ ದಿನಗಳ ಹಿಂದಷ್ಟೇ ಲೋಕೊಪೈಲಟ್ಗಳಿಗೆ ಹಾಗೂ ಹೋಟೆಲ್ ಸಿಬ್ಬಂದಿಗೆ ಕೊರೊನಾ ಸೋಂಕು ಕಂಡುಬಂದಿತ್ತು. ಇದೀಗ ಕಾರ್ಖಾನೆ ಕಾರ್ಮಿಕನಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆತಂಕ ಮನೆಮಾಡಿದೆ.
ಸದ್ಯಕ್ಕೆ ತಾಲೂಕಿನಲ್ಲಿ 51 ಸಕ್ರಿಯ ಪ್ರಕರಣಗಳಿದ್ದು, ಕಾರ್ಮಿಕನ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.