ಕರ್ನಾಟಕ

karnataka

ETV Bharat / city

ಬಳ್ಳಾರಿಯಲ್ಲಿ ನಕಲಿ ವೈದ್ಯನ ಕ್ಲಿನಿಕ್​ ಮೇಲೆ ಅಧಿಕಾರಿಗಳ ದಾಳಿ

18 ವರ್ಷದಿಂದ ಬಾದನಹಟ್ಟಿ ಗ್ರಾಮದಲ್ಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಆಂಧ್ರ ಮೂಲದ ಕೆ. ರುದ್ರಪ್ಪ ಅವರ ಕ್ಲಿನಿಕ್​ ಮೇಲೆ ವೈದ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ, ವೈದ್ಯಕೀಯ ಪದವಿ ಪಡೆಯದೇ ಚಿಕಿತ್ಸೆ ಕೊಡುತ್ತಿರುವುದು ಬೆಳಕಿಗೆ ಬಂದಿದೆ.

fake doctor health  inspector raid in Ballari
ಬಳ್ಳಾರಿಯಲ್ಲಿ ನಕಲಿ ವೈದ್ಯನ ಕ್ಲಿನಿಕ್​ ಮೇಲೆ ಅಧಿಕಾರಿಗಳ ದಾಳಿ

By

Published : Jun 7, 2022, 5:37 PM IST

ಬಳ್ಳಾರಿ:ವೈದ್ಯಕೀಯ ವಿದ್ಯಾರ್ಹತೆ ಇಲ್ಲದೇ ಚಿಕಿತ್ಸೆ ನೀಡುತ್ತಿದ್ದ ವೈದ್ಯನ ಕ್ಲಿನಿಕ್​ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ಆಂಧ್ರ ಮೂಲದ ಕೆ. ರುದ್ರಪ್ಪ ಅವರ ಕ್ಲಿನಿಕ್​ನ್ನು ಅಧಿಕಾರಿಗಳು ಪರಿಶೀಲಿಸಿದಾಗ ನಕಲಿ ವೈದ್ಯರೆಂಬುದು ತಿಳಿದು ಬಂದಿದೆ. ಗ್ರಾಮದಲ್ಲಿ 18 ವರ್ಷಗಳಿಂದ ವೈದ್ಯಕೀಯ ವೃತ್ತಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ನಕಲಿ ವೈದ್ಯ ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಬಾದನಟ್ಟಿ ಗ್ರಾಮದ ಹಿರಿಯ ಮುಖಂಡರ ದೂರಿನ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಾಲೂಕು ಆರೋಗ್ಯ ಅಧಿಕಾರಿ ಡಾ.ಮೋಹನ ಕುಮಾರಿ, ಬಾದನಹಟ್ಟಿ ಸಮುದಾಯ ಆರೋಗ್ಯಾಧಿಕಾರಿ ಮೋತಿ, ಆರೋಗ್ಯ ನಿರಿಕ್ಷಣಾಧಿಕಾರಿ ಬಸವರಾಜ್ ಹಾಗೂ ಕುರುಗೋಡು ಪೋಲಿಸ್ ಠಾಣೆ ಎಎಸ್​ಐ ಚಂದ್ರಮೌಳಿ ಕ್ಲಿನಿಕ್​ಗೆ ದಾಳಿ ನಡೆಸಿದ್ದಾರೆ.

ಕುರುಗೋಡು ಪೋಲಿಸ್ ಠಾಣೆಯಲ್ಲಿ ಐಪಿಸಿ 420 ಮತ್ತು ಕೆಪಿಎಂಇ ಕಾಯ್ದೆ ಸೆಕ್ಷನ್ 19(1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಕೈಮೇಲೆ ಆರೋಪಿ ಹೆಸರು ಬರೆದುಕೊಂಡು, ಆತ್ಮಹತ್ಯೆಗೆ ಶರಣಾದ ಅತ್ಯಾಚಾರ ಸಂತ್ರಸ್ತೆ

ABOUT THE AUTHOR

...view details