ಕರ್ನಾಟಕ

karnataka

ETV Bharat / city

ಚಿಪ್ಪುಹಂದಿ ಚಿಪ್ಪುಗಳನ್ನ ಮಾರಾಟ ಮಾಡುತ್ತಿದ್ದ ಐವರ ಬಂಧನ - bellary news

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹರವದಿ ಕ್ರಾಸ್ ಬಸ್ ನಿಲ್ದಾಣದ ಬಳಿ 3.5 ಕೆಜಿ ಚಿಪ್ಪುಹಂದಿ ಚಿಪ್ಪುಗಳನ್ನ ಮಾರಾಟ ಮಾಡುತ್ತಿದ್ದ ಐವರನ್ನ ಬಳ್ಳಾರಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ತಂಡ ಬಂಧಿಸಿದೆ.

ಚಿಪ್ಪುಹಂದಿ ಚಿಪ್ಪುಗಳನ್ನ ಮಾರಾಟ ಮಾಡುತ್ತಿದ್ದ ಐವರ ಬಂಧನ

By

Published : Oct 17, 2019, 10:07 AM IST

ಬಳ್ಳಾರಿ:ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹರವದಿ ಕ್ರಾಸ್ ಬಸ್ ನಿಲ್ದಾಣದ ಬಳಿ 3.5 ಕೆಜಿ ಚಿಪ್ಪುಹಂದಿ ಚಿಪ್ಪುಗಳನ್ನ ಮಾರಾಟ ಮಾಡುತ್ತಿದ್ದ ಐವರನ್ನ ಬಳ್ಳಾರಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ತಂಡ ಬಂಧಿಸಿದೆ.

ಜಿಲ್ಲೆಯ ಸಂಡೂರು ತಾಲೂಕಿನ ಲಕ್ಕಲಹಳ್ಳಿ ಅಗ್ರಹಾರ ನಿವಾಸಿಗಳಾದ ಗೌಡ್ರು ಓಬಯ್ಯ (50), ಈರ ನಾಗಯ್ಯನವರ ಓಬಯ್ಯ (39), ಹಳೇ ವಡ್ಡಿನಕಟ್ಟೆ ಗ್ರಾಮದ ನಿವಾಸಿ ಕೆ.ಕೃಷ್ಣಪ್ಪ (64), ಕೂಡ್ಲಿಗಿ ತಾಲೂಕಿನ ರಾಮದುರ್ಗದ ಕುದುರೆಡುವು ಗ್ರಾಮದ ನಿವಾಸಿ ಕೆ.ನಾಗೇಶ (27), ರಾಮದುರ್ಗದ ನಿವಾಸಿ ನೀರಗಂಟಿ ರಾಜಪ್ಪ (34) ಎಂಬುವವರನ್ನು ಬಂಧಿಸಲಾಗಿದೆ.

ಆರೋಪಿಗಳಿಂದ 3.5 ಕೆಜಿ ಚಿಪ್ಪುಹಂದಿ ಚಿಪ್ಪು, ಮೂರು ಬೈಕ್ ಹಾಗೂ ನಾಲ್ಕು ಮೊಬೈಲ್​ಗಳನ್ನ ವಶಕ್ಕೆ ಪಡೆಯಲಾಗಿದೆ ಎಂದು ಬಳ್ಳಾರಿ ಉಪವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶಕುಮಾರ್​ ತಿಳಿಸಿದ್ದಾರೆ.

ಕೂಡ್ಲಿಗಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರಂಗನಾಥ, ಕೂಡ್ಲಿಗಿ ವಲಯ ಅರಣ್ಯಾಧಿಕಾರಿ ಎ.ರೇಣುಕಮ್ಮ, ಗುಡೇಕೋಟೆ ವಲಯ ಅರಣ್ಯಾಧಿಕಾರಿ ಬಿ.ಎಸ್.ಮಂಜುನಾಥ, ಸಂಚಾರಿ ದಳದ ಅರಣ್ಯಾಧಿಕಾರಿ ಸೋಮಶೇಖರರೆಡ್ಡಿ ಸೇರಿದಂತೆ ಇನ್ನಿತರೆ ಸಿಬ್ಬಂದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಇನ್ನೂ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಹುಡುಕಾಟ ಮುಂದುವರೆದಿದೆ.

ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆಯ ವಿವಿಧ ಕಲಂಗಳಲ್ಲಿ ಪ್ರಕರಣ ದಾಖಲಿಸಲಾಗಿದೆ.

ABOUT THE AUTHOR

...view details