ಬಳ್ಳಾರಿ:"ಇಂದು ಸಂಜೆ ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ನಾನು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವೆ" ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ಫೇಸ್ಬುಕ್ ಮೂಲಕ ತಿಳಿಸಿದ್ದಾರೆ.
ಆಗಸ್ಟ್ 30 ರಂದು ಬಳ್ಳಾರಿಗೆ ಭೇಟಿ ನೀಡಿ ಪ್ರಾಣಸ್ನೇಹಿತ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿಯ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗಾಲಿ ಜನಾರ್ಧನ್ ರೆಡ್ಡಿಗೆ ಕೊರೊನಾ ಪಾಸಿಟಿವ್ ಆಸ್ಪತ್ರೆಯಲ್ಲಿ ಉತ್ತಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಯಾವುದೇ ರೋಗದ ಲಕ್ಷಣಗಳು ಇಲ್ಲದಿದ್ದರೂ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗುವೆ ಎಂದು ಪೋಸ್ಟ್ ಮಾಡಿದ್ದಾರೆ.
ನನ್ನ ಪ್ರಾಣ ಸ್ನೇಹಿತ ಗಾಲಿ ಜನಾರ್ಧನ ರೆಡ್ಡಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಪ್ರೀತಿಯ ಗೆಳೆಯ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಅಂತ ಸಚಿವರ ಶ್ರೀರಾಮುಲು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.