ವಿಜಯನಗರ: ಹಗರಿಬೊಮ್ಮನಹಳ್ಳಿ ಪಟ್ಟಣದ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ವಿಚ್ಛೇದನ ಹಂತ ತಲುಪಿದ್ದ ದಂಪತಿಯನ್ನು ನ್ಯಾಯಾಧೀಶರು ಒಂದುಗೂಡಿಸಿದ್ದಾರೆ. ಈ ದಂಪತಿ ಇದೀಗ ಪರಸ್ಪರ ವಿರಸ ಮರೆತು ಸಮರಸವೇ ಜೀವನ ಎಂಬಂತೆ ಕೂಡಿ ಬಾಳುವ ವಾಗ್ದಾನ ಮಾಡಿದ್ದಾರೆ.
ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ, ಕಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶರಾದ ಭಾಗ್ಯಲಕ್ಷ್ಮೀ ಅವರ ಸಮ್ಮುಖದಲ್ಲಿ 1,41,000 ರೂಪಾಯಿ ಹಣ ಸಂಧಾಯದೊಂದಿಗೆ, ಚೆಕ್ಬೌನ್ಸ್, ವಾಹನಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 144 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಯಿತು. ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಹಿರಿಯ ಹಾಗೂ ಕಿರಿಯ ಶ್ರೇಣಿ ನ್ಯಾಯಾಲಯದ ಒಟ್ಟು 190 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯಾರ್ಥಗೊಳಿಸಲಾಯಿತು.