ಹೊಸಪೇಟೆ:ವಿಶ್ವವಿಖ್ಯಾತ ಹಂಪಿಯ ಜನತಾ ಪ್ಲಾಟ್ನಲ್ಲಿ ವಾಣಿಜ್ಯ ಚಟುವಟಿಕೆಗೆ ಸುಪ್ರೀಂಕೋರ್ಟ್ ನಿರ್ಬಂಧ ಹೇರಿದ್ದು, ವ್ಯಾಪಾರ-ವಹಿವಾಟು ಸಂಪೂರ್ಣ ಸ್ತಬ್ಧವಾಗಿದೆ.
ಹಂಪಿ; ಜನತಾ ಪ್ಲಾಟ್ನಲ್ಲಿ ವಾಣಿಜ್ಯ ಚಟುವಟಿಕೆಗೆ ಸುಪ್ರೀಂ ಕೋರ್ಟ್ ನಿರ್ಬಂಧ - Hampi Janata Plot
ಸುಪ್ರೀಂಕೋರ್ಟ್ನಲ್ಲಿ ವಾಣಿಜ್ಯ ಚಟುವಟಿಕೆ ಕುರಿತ ಪ್ರಕರಣ ವಿಚಾರಣೆ ಹಂತದಲ್ಲಿರುವ ಹಿನ್ನೆಲೆ, ವಿಶ್ವವಿಖ್ಯಾತ ಹಂಪಿ ಅಭಿವೃದ್ಧಿ ನಿರ್ವಹಣಾ ಪ್ರಾಧಿಕಾರ ಹಂಪಿಯ ಜನತಾ ಪ್ಲಾಟ್ ಸೇರಿದಂತೆ ಬಸ್ ನಿಲ್ದಾಣ, ಪಾರ್ಕಿಂಗ್ ಸ್ಥಳಗಳಲ್ಲಿನ ವಾಣಿಜ್ಯ ಚಟುವಟಿಕೆ ಬಂದ್ ಮಾಡಿಸಲಾಗಿದೆ.
![ಹಂಪಿ; ಜನತಾ ಪ್ಲಾಟ್ನಲ್ಲಿ ವಾಣಿಜ್ಯ ಚಟುವಟಿಕೆಗೆ ಸುಪ್ರೀಂ ಕೋರ್ಟ್ ನಿರ್ಬಂಧ hampi-janata-plot-commercial-activist-completely-bund](https://etvbharatimages.akamaized.net/etvbharat/prod-images/768-512-10611956-thumbnail-3x2-sow.jpg)
ವಾಣಿಜ್ಯ ಚಟುವಟಿಕೆ ಕುರಿತ ಪ್ರಕರಣ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿರುವ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಹಂಪಿ ಅಭಿವೃದ್ಧಿ ಪ್ರಾಧಿಕಾರ ಹಂಪಿಯ ಜನತಾ ಪ್ಲಾಟ್ ಸೇರಿದಂತೆ ಬಸ್‌ನಿಲ್ದಾಣ, ಪಾರ್ಕಿಂಗ್ ಸ್ಥಳಗಳಲ್ಲಿನ ವಾಣಿಜ್ಯ ಚಟುವಟಿಕೆ ಬಂದ್ ಮಾಡಿಸಲಾಗಿದೆ.
ಹಂಪಿ ಅಭಿವೃದ್ದಿ ಪ್ರಾಧಿಕಾರದ ಆಯುಕ್ತ ಸಿದ್ದರಾಮೇಶ್ವರ ಮಠದ ಮಾತನಾಡಿ, ಹಂಪಿಯ ಪ್ರಕರಣವು ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ. ಅಲ್ಲದೇ, ಹಂಪಿಯ ಸ್ಮಾರಕಗಳ ಗುಚ್ಛವನ್ನು ಯುನೆಸ್ಕೊ ಸಂರಕ್ಷಣೆ ಮಾಡಬೇಕು ಎಂದು ಹೇಳಿದೆ. ಹೀಗಾಗಿ, ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಲಾಗಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆಲೋಚಿಸಲಾಗಿದೆ ಎಂದು ಹೇಳಿದರು.