ಬಳ್ಳಾರಿ:ಗಣಿ ಜಿಲ್ಲೆಯ ಹಲವು ಸರ್ಕಾರಿ ಕಚೇರಿಗಳ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲಾ ಸರ್ಕಾರಿ ಕಚೇರಿಗಳ ಸಿಬ್ಬಂದಿಯ ರ್ಯಾಂಡಮ್ ಟೆಸ್ಟ್ ನಡೆಸಲು ಮುಂದಾಗಿದೆ.
ಸರ್ಕಾರಿ ನೌಕರರಿಗೆ ರ್‍ಯಾಂಡಮ್ ಟೆಸ್ಟ್ ನಡೆಸಲು ಆರೋಗ್ಯ ಇಲಾಖೆ ನಿರ್ಧಾರ - DHO Dr. Janardhan
ಬಳ್ಳಾರಿಯ ಹಲವು ಸರ್ಕಾರಿ ಕಚೇರಿಗಳ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರಿ ಕಚೇರಿಗಳ ಸಿಬ್ಬಂದಿಯ ರ್ಯಾಂಡಮ್ ಟೆಸ್ಟ್ ನಡೆಸಲು ಮುಂದಾಗಿದೆ.

ಈ ಕುರಿತು ಮಾತನಾಡಿದ ಡಿಹೆಚ್ಒ ಡಾ. ಜನಾರ್ದನ ಅವರು, ಜಿಲ್ಲಾಧಿಕಾರಿ ಕಚೇರಿಯ 11 ಸಿಬ್ಬಂದಿ ಹಾಗೂ ತಹಶೀಲ್ದಾರ್ ಕಚೇರಿಯ ಹಲವು ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ, ಜಿಲ್ಲಾಡಳಿತ ಈಗಾಗಲೇ ಈ ಕಚೇರಿಗಳನ್ನು ಸೀಲ್ಡೌನ್ ಮಾಡಿದೆ. ಅಲ್ಲದೇ, ತಹಶೀಲ್ದಾರ್ ಕಚೇರಿಯ ನೂರು ಸಿಬ್ಬಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವೇಳೆ ತಹಶೀಲ್ದಾರ್ ಕಚೇರಿಯ 13 ಮಂದಿ ಹಾಗೂ ಕಂದಾಯ ವಿಭಾಗದ ಇಬ್ಬರು (ರೆವಿನ್ಯೂ), ಆರೋಗ್ಯ ವಿಭಾಗದ ಒಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಇನ್ನುಳಿದ ಸರ್ಕಾರಿ ಇಲಾಖೆಯ ಕಚೇರಿಗಳಲ್ಲಿನ ಸಿಬ್ಬಂದಿಯ ರ್ಯಾಂಡಮ್ ಟೆಸ್ಟ್ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಸಿಬ್ಬಂದಿಯ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನೂ ಕೋವಿಡ್ ಟೆಸ್ಟ್ಗೆ ಒಳಪಡಿಸಲಾಗುವುದು ಎಂದರು.