ಬಳ್ಳಾರಿ: ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ಸಿಗ್ತಿಲ್ಲ ಎಂಬುದಾಗಿ ಆರೋಪಿಸುತ್ತಿದ್ದ ಪ್ರತಿಪಕ್ಷದ ನಾಯಕರು ಬಾಯಿಗೆ ಬೀಗ ಹಾಕಿಕೊಂಡು ಕುಳಿತುಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಆರೋಗ್ಯ ಸಚಿವ ಸಚಿವ ಬಿ.ಶ್ರೀರಾಮುಲು ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಪರಿಹಾರ ತಡ ಆಗಿದ್ದಕ್ಕೆ ನಾನೂ ಎಲ್ಲರಲ್ಲೂ ಕ್ಷಮೆ ಕೇಳಿದ್ದೇನೆ. ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಮಾರ್ಗಸೂಚಿಯಂತೆ ಕೇಂದ್ರ ಸರ್ಕಾರ ₹ 1200 ಕೋಟಿ ಕೇಂದ್ರ ಬಿಡುಗಡೆ ಮಾಡಿದೆ. ಇನ್ನೂ ಅಧಿಕ ಪರಿಹಾರ ಬೇಕಿದೆ. ಈ ಕುರಿತು ರಾಜ್ಯದ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿ ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡುತ್ತೇವೆ. ಇದರಲ್ಲಿ ರಾಜಕಾರಣ ಮಾಡುವುದು ತಪ್ಪು ಎಂದು ತಿಳಿಸಿದರು.
ಅಧಿಕಾರ ಕಳೆದುಕೊಂಡ ಕೈ ನಾಯಕರು ವಿಚಲಿತ: