ಬಳ್ಳಾರಿ: ಬಳ್ಳಾರಿಯಲ್ಲಿ ಬುಧವಾರ ಸಂಜೆ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತ್ತು. ನಿನ್ನೆ ಸಂಜೆ ಸುರಿದ ಮಳೆಗೆ ತಾಲೂಕಿನ ಸೋಮಸಮುದ್ರ ಗ್ರಾಮದ ಮನೆಗಳಿಗೆ ಹಾನಿಯಾಗಿವೆ. ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಭಾರಿ ಅವಾಂತರ ಸೃಷ್ಟಿಸಿದೆ.
ಬಳ್ಳಾರಿಯಲ್ಲಿ ಭಾರಿ ಮಳೆ.. ಜನಜೀವನ ಅಸ್ತವ್ಯಸ್ತ! - state rain news
ಬಳ್ಳಾರಿಯಲ್ಲಿ ಬುಧವಾರ ಸಂಜೆ ಭಾರಿ ಮಳೆಯಾಗಿ ಅವಾಂತರ ಸೃಷ್ಟಿಸಿತ್ತು.
ಬಳ್ಳಾರಿಯಲ್ಲಿ ಭಾರಿ ಮಳೆ.
ನಿನ್ನೆ ಸಂಜೆ 6 ಗಂಟೆಯಿಂದ ಸುರಿದ ಗಾಳಿ ಸಹಿತ ಮಳೆಗೆ ಗ್ರಾಮಸ್ಥರು ಪರದಾಡಿದ್ದಾರೆ. ಕೆಲ ಮನೆಯ ಮೇಲ್ಛಾವಣಿ ಹಾರಿ ಹೋಗಿವೆ. ಮನೆಗಳಿಗೆ ನೀರು ನುಗ್ಗಿದ್ದು, ಗ್ರಾಮಸ್ಥರು ನಿದ್ದೆಯಿಲ್ಲದೇ ಪರದಾಡಿದ್ದಾರೆ. 8 ವಿದ್ಯುತ್ ಕಂಬಗಳು ನೆಲಕ್ಕುರುಳಿದ ಪರಿಣಾಮ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಗ್ರಾಮಸ್ಥರು ನಿನ್ನೆ ರಾತ್ರಿ ಕತ್ತಲಲ್ಲೇ ಕಾಲ ಕಳೆಯುವಂತಾಯಿತು.
ಇದನ್ನೂ ಓದಿ:ಕೊಡಗು ಜಿಲ್ಲೆಯಲ್ಲಿ ಆಲಿಕಲ್ಲು ಮಳೆ: 25 ಕೆಜಿ ತೂಕದ ಆಲಿ ಕಲ್ಲು ಪತ್ತೆ