ಬಳ್ಳಾರಿ:ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಮಳೆ ಸುರಿದಿದ್ದು, ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.
ಬಳ್ಳಾರಿಯಲ್ಲಿ ಭಾರೀ ಮಳೆ: ಸಂಚಾರ ಅಸ್ತವ್ಯಸ್ತ - bellary rain news
ಬಳ್ಳಾರಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಧ್ಯಾಹ್ನ ಒಂದು ಗಂಟೆಯ ನಂತರ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಗಣಿನಾಡಲ್ಲಿ ಭಾರೀ ಮಳೆ: ಸಂಚಾರ ಅಸ್ತವ್ಯಸ್ತ
ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ ಒಂದು ಗಂಟೆಯ ನಂತರ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಇನ್ನು, ಮಳೆ ನೀರಿನಿಂದಾಗಿ ಎಸ್.ಎನ್. ಪೇಟೆ ಹಾಗೂ ಕನಕದುರ್ಗಮ್ಮ ದೇಗುಲದ ಕೆಳ ಸೇತುವೆಗಳು ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.