ಹೊಸಪೇಟೆ: ಏಪ್ರಿಲ್ 15 ಮತ್ತು 16 ರಂದು ಸಾರಿಗೆ ನೌಕರರು ವಿಭಿನ್ನ ಪ್ರತಿಭಟನೆ ನಡೆಸಲಿರುವ ಹಿನ್ನೆಲೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸುವಂತೆ ಹೊಸಪೇಟೆ ಸಾರಿಗೆ ವಿಭಾಗದ ನಿಯಂತ್ರಣಾಧಿಕಾರಿ ಜಿ.ಶೀನಯ್ಯ ಪಟ್ಟಣ ಠಾಣೆಗೆ ಪತ್ರ ಬರೆದಿದ್ದಾರೆ.
ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆ ಸೂಕ್ತ ಬಂದೋಬಸ್ತ್ ಮಾಡುವಂತೆ ಠಾಣೆಗೆ ಪತ್ರ - ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆ ಸೂಕ್ತ ಬಂದೋಬಸ್ತ್ ಕೈಗೊಳ್ಳುವಂತೆ ಠಾಣೆಗೆ ಪತ್ರ
ಇಂದು ಮತ್ತೆ ನಾಳೆ ಸಾರಿಗೆ ನೌಕರರು ಹೊಸಪೇಟೆಯಲ್ಲಿ ವಿಭಿನ್ನ ರೀತಿಯ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳುವಂತೆ ಹೊಸಪೇಟೆ ಸಾರಿಗೆ ವಿಭಾಗದ ನಿಯಂತ್ರಣಾಧಿಕಾರಿ ಜಿ.ಶೀನಯ್ಯ ಪಟ್ಟಣ ಠಾಣೆಗೆ ಪತ್ರ ಬರೆದಿದ್ದಾರೆ.
ಹೊಸಪೇಟೆ
ಎ.15 ರಂದು ಸಾರಿಗೆ ನೌಕರರು ಸಂಜೆ 6 ಗಂಟೆಯಿಂದ ಏಳು ಗಂಟೆಯವರೆಗೆ ಮೇಣದ ಬತ್ತಿ ಹಚ್ಚಿಕೊಂಡು ಬೀದಿಗಳಲ್ಲಿ ಮೆರವಣಿಗೆ ನಡೆಸಲಿದ್ದಾರೆ. ಹಾಗೂ ಏ.16 ರಂದು ಶಾಸಕರ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಂಸ್ಥೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳುವ ಸಲುವಾಗಿ ಬಂದೋಬಸ್ತ್ ವ್ಯವಸ್ಥೆ ಒದಗಿಸಬೇಕು. ಜೊತೆಗೆ ಹೊಸಪೇಟೆ ಘಟಕ ಹಾಗೂ ಕೇಂದ್ರ ಬಸ್ ನಿಲ್ದಾಣಗಳಲ್ಲಿ ಸಾರಿಗೆ ವಾಹನ ಕಾರ್ಯಾಚರಣೆಗೆ ಅಡಚಣೆ ಉಂಟಾಗದಂತೆ ರಕ್ಷಣೆ ಒದಗಿಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ.