ಬಳ್ಳಾರಿ:ಮಲೆನಾಡಿನಲ್ಲಿ ಭರ್ಜರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿಜಿಲ್ಲೆಯ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳವಾಗಿದೆ. ಇಂದು ಅಂದಾಜು 34,374 ಕ್ಯೂಸೆಕ್ ನೀರು ಹರಿದುಬಂದಿದ್ದು, 302 ಕ್ಯೂಸೆಕ್ ನೀರನ್ನು ಹೊರಗೆ ಬಡಿಲಾಗಿದೆ.
ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ: ರೈತರ ಮೊಗದಲಿ ಮೂಡಿದ ಮಂದಹಾಸ - ರೈತರ ಜೀವನಾಡಿ ತುಂಗಭದ್ರಾ ನದಿ
ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳವಾಗಿದ್ದು, ಜಲಾಶಯದಲ್ಲಿ 18.247 ಟಿಎಂಸಿ ನೀರು ಸಂಗ್ರಹವಾಗಿದೆ.
ನಿನ್ನೆ 26,007 ಕ್ಯೂಸೆಕ್ ಹರಿದು ಬಂದಿದ್ದು, ಈ ಎರಡು ದಿನದಲ್ಲೇ 2 ಟಿಎಂಸಿಗಿಂತಲೂ ಅಧಿಕ ನೀರು ಹರಿದು ಬಂದಿದೆ. ಜಲಾಶಯದಲ್ಲಿ 18.247 ಟಿಎಂಸಿ ನೀರು ಸಂಗ್ರಹವಾಗಿದೆ. ಗುರುವಾರ 13.098 ಟಿಎಂಸಿ ನೀರಿತ್ತು. ಬುಧವಾರ 7,321 ಕ್ಯೂಸೆಕ್ ಮತ್ತು ಗುರುವಾರ 16,211 ಕ್ಯೂಸೆಕ್ ನೀರು ಹರಿದು ಬಂದಿದೆ.
ಕಳೆದ ವರ್ಷ ಇದೇ ವೇಳೆಯಲ್ಲಿ 4.015 ಟಿಎಂಸಿ ಸಂಗ್ರಹವಿತ್ತು. ಆದರೆ, ಈ ಬಾರಿ ಜಲಾಶಯಕ್ಕೆ ಒಳಹರಿವು ಹೆಚ್ಚಾದ ಕಾರಣ ನೀರಿನ ಸಂಗ್ರಹಮಟ್ಟ ಅಧಿಕವಾಗಿದೆ. ಶಿವಮೊಗ್ಗದ ತುಂಗಾ ಜಲಾಶಯದಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇದರಿಂದ ತುಂಗಭದ್ರಾ ಜಲಾಶಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗುತ್ತಿದೆ ಎಂದು ತುಂಗಭದ್ರಾ ಬೋರ್ಡ್ ಮಂಡಳಿ ತಿಳಿಸಿದೆ.